ಬೆಂಗಳೂರು: ರಾಜ್ಯ ಸರ್ಕಾರದ ಗೃಹ ಇಲಾಖೆ ಸತ್ತು ಹೋಗಿದೆ. ಭಯೋತ್ಪಾದಕರಿಗೆ ಕರ್ನಾಟಕ ಸ್ವರ್ಗ ಆಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್.ಅಶೋಕ್, ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಮೊಬೈಲ್ ಬಳಸುತ್ತಾರೆ. ಇವರ ಮೇಲಿದ್ದ ಎಲ್ಲಾ ಕೇಸ್ಗಳನ್ನೂ ವಾಪಸ್ ಪಡೆದರು. ಇದೀಗ ಪರಪ್ಪನ ಅಗ್ರಹಾರ ಜೈಲು ಸೇರಿ ಉಗ್ರ ಕೃತ್ಯದಲ್ಲಿ ಅರೆಸ್ಟ್ ಆದವರಿಗೆ ಮೊಬೈಲ್ ಕೊಡುತ್ತಾರೆ. ರಾಜ್ಯ ಸರ್ಕಾರದ ಗೃಹ ಇಲಾಖೆ ಸತ್ತೇ ಹೋಗಿದೆ ಎಂದು ಕಿಡಿಕಾರಿದ್ದಾರೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲು ಅಪರಾಧಿಗಳ ಪಾಲಿನ ಸ್ವರ್ಗ ಎಂಬುವುದು ಮತ್ತೊಮ್ಮೆ ಸಾಬೀತಾಗಿದೆ. ನಟೋರಿಯಸ್ ಕ್ರಿಮಿನಲ್ ಉಮೇಶ್ ರೆಡ್ಡಿ ಮತ್ತು ಲಷ್ಕರ್ ಉಗ್ರ ಮೊಬೈಲ್ ಬಳಸುತ್ತಿರುವ ವಿಡಿಯೋಗಳು ಸಮಾಜಿಕ ಜಾಲತಾಣಗಳಿ ಹರಿದಾಡುತ್ತಿ. ಸದ್ಯ ಈ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಇನ್ನು, ಬೆಂಗಳೂರಿನ ಪಣತ್ತೂರಿನಲ್ಲಿ ರಸ್ತೆಗಳ ಸಮಸ್ಯೆ ವಿಚಾರವಾಗಿ ಮಾತನಾಡಿ, ರಸ್ತೆಯಲ್ಲಿ ಕಸ ಇರುವ ಕಾರಣ ರಸ್ತೆಗಳು ಬ್ಲಾಕ್ ಆಗಿವೆ. ರಸ್ತೆಗಳು ಬ್ಲಾಕ್ ಆಗಿರುವುದರಿಂದ ಫುಟ್ಪಾತ್ನಲ್ಲಿ ಬೈಕ್ ಸಂಚರಿಸುತ್ತಿದ್ದಾರೆ. ಪಣತ್ತೂರಿನಲ್ಲಿ ಟನಲ್ನಲ್ಲಿ ಜನ ಸಂಚಾರ ಮಾಡುತ್ತಿದ್ದಾರೆ. ತೆರಿಗೆ ಹಣವನ್ನೆಲ್ಲಾ ತೆಗೆದುಕೊಂಡು ಗ್ಯಾರಂಟಿಗಳಿಗೆ ಹಾಕಿದ್ದಾರೆ. ಒಂದೊಂದು ರಸ್ತೆಗೆ 25 ಕೋಟಿಯಿಂದ 30 ಕೋಟಿ ರೂ ಬಿಲ್ ಬಾಕಿ ಇದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ರಾಯಚೂರಿನಲ್ಲಿ KSRTC ಬಸ್ ಹರಿದು ಬಾಲಕ ಸ್ಥಳದಲ್ಲೇ ಸಾವು



















