ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಭದ್ರಾ ಚಾನಲ್‌ಗೆ ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ಚನ್ನಗಿರಿ ತಾಲೂಕಿನ ಸೂಳೆಕೆರೆ ಬಳಿಯ ಹೊಸೂರಿನಲ್ಲಿ ನಡೆದಿದೆ.
ದಾವಣಗೆರೆಯ ಮೂಲದ ಸಿದ್ದೇಶ್ (38), ಮಲ್ಲಿಕಾರ್ಜುನ್ (27) ಮೃತ ದುರ್ದೈವಿಗಳು. ಕಾರಿನಲ್ಲಿ ಆರು ಜನ ಮಂಗಳೂರು ಬಳಿಯ ಕೊರಗಜ್ಜನ ದೇವಸ್ಥಾನಕ್ಕೆ ಹೋಗಿ, ವಾಪಸ್ ಆಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಈ ಅವಘಡದಲ್ಲಿ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದು, ನಾಲ್ವರು ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಚಾಲಕ ನಿದ್ರೆ ಮಂಪರಿನಲ್ಲಿ ಕಾರು ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ.
ಚಾನಲ್‌ನಲ್ಲಿ ಬಿದ್ದ ಕಾರು ಹಾಗೂ ಮೃತದೇಹಗಳನ್ನು ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದಾರೆ. ಈ ಘಟನಾ ಸಂಬಂಧ ಸಂತೆಬೆನ್ನೂರು ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಪತ್ನಿಗೆ ಜೀವ ಬೆದರಿಕೆ ಹಾಕಿದ್ದ ಪತಿಗೆ 1 ವರ್ಷ ಜೈಲು, 1 ಸಾವಿರ ದಂಡ


















