ಮಾಜಿ ಬಿಗ್‌ಬಾಸ್ ಸ್ಪರ್ಧಿ, ನಟ ಉಗ್ರಂ ಮಂಜು ಬದುಕಿನಲ್ಲಿ ಹೊಸ ಅಧ್ಯಾಯವೊಂದು ತೆರೆದುಕೊಂಡಿದೆ. ಉಗ್ರಂ ಮಂಜು ಅವರ ಮದುವೆ ನಿಶ್ಚಯವಾಗಿದ್ದು, ಈ ಬಗ್ಗೆ ಅಧಿಕೃತವಾಗಿ ಅವರೇ ಸಾಮಾಜಿಕ ಜಾಲತಾಣದಲ್ಲಿ ಖುಷಿ ಹಂಚಿಕೊಂಡಿದ್ದಾರೆ.

ಉಗ್ರಂ ಮಂಜು ಅವರು ಸಂಧ್ಯಾ ಅವರನ್ನು ವಿವಾಹವಾಗಲಿದ್ದು, ಇಬ್ಬರ ನಿಶ್ಚಿತಾರ್ಥ ಕಾರ್ಯಕ್ರಮ ಆತ್ಮೀಯರು, ಸ್ನೇಹಿತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿದೆ. ಪರಸ್ಪರ ಉಂಗುರ ಬದಲಾಯಿಸಿಕೊಳ್ಳುತ್ತಿರುವ ಚಿತ್ರಗಳನ್ನು ಉಗ್ರಂ ಮಂಜು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಬದುಕಿನ ಹೊಸ ಅಧ್ಯಾಯ ಆರಂಭವಾಗಿದೆ… ನಿಮ್ಮ ಆಶೀರ್ವಾದ ನಮ್ಮ ಮೇಲಿರಲಿ, ದೇವರ ಕೃಪೆಯಿಂದ, ಕುಟುಂಬದ ಆಶೀರ್ವಾದದಿಂದ… ನಾವು ಜೀವನದ ಹೊಸ ಹಾದಿಗೆ ಕಾಲಿಟ್ಟಿದ್ದೇವೆ, ಹೊಸ ಬಂಧದ ಆರಂಭ… ನಿಶ್ಚಿತಾರ್ಥದ ಸುಂದರ ಕ್ಷಣ ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳುತ್ತಿದ್ದೇವೆ’ ಎಂದಿದ್ದಾರೆ.
ಸಂಧ್ಯಾ ಅವರು ಸ್ಪರ್ಷ್ ಆಸ್ಪತ್ರೆಯಲ್ಲಿ ಟ್ರಾನ್ಸ್ಪ್ಲ್ಯಾಂಟ್ ಕೋರ್ಡಿನೇಟರ್ ಆಗಿ ವೃತ್ತಿ ಮಾಡುತ್ತಿದ್ದಾರೆ. ಇನ್ಸ್ಟಾಗ್ರಾಂನಲ್ಲಿಯೂ ಬಹಳ ಸಕ್ರಿಯವಾಗಿರುವ ಸಂಧ್ಯಾ ಅವರು ತಮ್ಮ ಹಲವಾರು ವಿಡಿಯೋಗಳು ಮತ್ತು ಚಿತ್ರಗಳನ್ನು ಅಪ್ಲೋಡ್ ಮಾಡಿದ್ದಾರೆ. ಇದೀಗ ಉಗ್ರಂ ಮಂಜು ಮತ್ತು ಸಂಧ್ಯಾ ಅವರ ನಿಶ್ಚಿತಾರ್ಥ ನೆರವೇರಿದ್ದು ಜನವರಿ ತಿಂಗಳಲ್ಲಿ ಮುದ್ದಾದ ಜೋಡಿಯ ವಿವಾಹ ನಡೆಯಲಿದೆ.
ಇದನ್ನೂ ಓದಿ : ಭಾರತದಲ್ಲಿ ದೊಡ್ಡ ಭಾಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ ಮೂವರು ಐಸಿಸ್ ಉಗ್ರರ ಬಂಧನ!


















