ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಲಿಮಿಟೆಡ್ (NABARD Financial Services Limited) ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ವಿವಿಧ ಕಸ್ಟಮರ್ ಸರ್ವಿಸ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಯ ವಿವರ ಇಂತಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಲಿಮಿಟೆಡ್ (NABARD)
ಖಾಲಿ ಇರುವ ಹುದ್ದೆಗಳು: ವಿವಿಧ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 15
ಉದ್ಯೋಗ ಸ್ಥಳ: ಬೆಂಗಳೂರು, ಧಾರವಾಡ, ಕಲಬುರಗಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪಿಯುಸಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಗರಿಷ್ಠ 33 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಸಲ್ಲಿಸಿದ ಅರ್ಜಿಗಳನ್ನು ಮೊದಲು ಪರಿಶೀಲಿಸಲಾಗುತ್ತದೆ. ನಂತರ ಸಂದರ್ಶನ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ nabfins.org ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಬೇಕು.
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆದು, ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ : ರಾಜ್ಯ ಸರ್ಕಾರದ DYES ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : 1.5 ಲಕ್ಷ ರೂಪಾಯಿ ಸ್ಯಾಲರಿ



















