ಆನೇಕಲ್ : ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆ ಸಮೀಪದ ಬಳ್ಳೂರು ಗ್ರಾಮದ ಕೆರೆಯಲ್ಲಿ ನಡೆದಿದೆ.
ಬಿಹಾರ ಮೂಲದ ಅನಿಕೇತ್ ಕುಮಾರ್ (12) ಮತ್ತು ಆಂಧ್ರ ಸಮೀಪದ ಕದ್ರಿ ಮೂಲದ ರೆಹಮತ್ ಬಾಬಾ (11) ಮೃತ ಬಾಲಕರು. ಶನಿವಾರ ಸಂಜೆ ಮನೆ ಬಳಿ ಆಟ ಆಡಿಕೊಂಡಿದ್ದ ಮಕ್ಕಳು ಕೆರೆ ಬಳಿ ತೆರಳಿದ್ದಾರೆ. ಈ ವೇಳೆ ಕೆರೆಗೆ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಶನಿವಾರ ಮಕ್ಕಳ ಪೋಷಕರು ಎಲ್ಲಾ ಕಡೆ ಹುಡುಕಾಟ ನಡೆಸಿದರೂ ಮಕ್ಕಳು ಪತ್ತೆ ಆಗಿರಲಿಲ್ಲ. ಇಂದು ಕೆರೆಯಲ್ಲಿ ಮೃತ ದೇಹಗಳು ತೇಲುತ್ತಿರುವುದನ್ನು ಸ್ಥಳೀಯರು ಗಮನಿಸಿ ಕೂಡಲೇ ಅತ್ತಿಬೆಲೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಕೂಡಲೇ ಸ್ಥಳಕ್ಕೆ ಬಂದ ಅತ್ತಿಬೆಲೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸಹಕಾರದಿಂದ ಮಕ್ಕಳ ಮೃತದೇಹವನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಇನ್ನು ಈ ಸಂಬಂಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಹೈಸ್ಪೀಡ್‌ನಲ್ಲಿ ಚಲಿಸುತ್ತಿದ್ದ ರೈಲಿನ ವಿಂಡ್‌ಸ್ಕ್ರೀನ್‌ಗೆ ಡಿಕ್ಕಿ ಹೊಡೆದ ಹದ್ದು | ಲೋಕೋ ಪೈಲಟ್‌ಗೆ ಗಾಯ!



















