ದಾವಣಗೆರೆ : ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿರುವ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿನ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರೆಯುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ದಾವಣಗೆರೆಯ ಈ ಬಗ್ಗೆ ಮಾತನಾಡಿದ ಅವರು, ಈ ವಿಚಾರವಾಗಿ ಸೋಮವಾರ ಗೃಹ ಸಚಿವ ಜಿ. ಪರಮೇಶ್ವರ್ ಸಭೆ ಕರೆದಿದ್ದಾರೆ. ತಪ್ಪು ಮಾಡಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಹಾಗೂ ಇನ್ನೂ ಮುಂದೆ ಇಂತಹ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೋಹನ್ ಭಾಗವತ್ ಹೇಳಿದ್ದಕ್ಕೆಲ್ಲ ನಾವು ಉತ್ತರಿಸಲಾಗುವುದಿಲ್ಲ ಎಂದ ಸಿಎಂ
ಆರ್‌ಎಸ್‌ಎಸ್ ಅನ್ನು ಹೊರಗಿಡುವ ಬಗ್ಗೆ ಸರ್ಕಾರದ ಆದೇಶದಲ್ಲಿ ಹೇಳಿಲ್ಲ. ಯಾವುದೇ ಸಂಘ ಸಂಸ್ಥೆಗಳು ಆಯಾ ಜಿಲ್ಲಾಧಿಕಾರಿಗಳ ಬಳಿ ಅನುಮತಿ ಪಡೆಯಬೇಕು ಎಂದು ಹೇಳಿದ್ದೇವೆ. ಅವರು ಹಾಗೆ ಭಾವಿಸಿಕೊಂಡಿದ್ದಾರೆ. ಮೋಹನ್ ಭಾಗವತ್ ಹೇಳಿದ್ದಕ್ಕೆಲ್ಲ ನಾವು ಉತ್ತರಿಸಲಾಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇದನ್ನೂ ಓದಿ : ಆನೇಕಲ್‌ನಲ್ಲಿ ದುರಂತ.. ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು


















