ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ (89) ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಧರ್ಮೇಂದ್ರ ಅವರು ಅಸ್ವಸ್ಥರಾಗಿದ್ದರು. ಇಂದು (ನ.10) ಬೆಳಿಗ್ಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಅವರ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಹಾಗೂ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಳೆದ ವಾರವಷ್ಟೇ ನಟ ಧರ್ಮೇಂದ್ರ ಅವರನ್ನು ಉಸಿರಾಟದ ತೊಂದರೆಯಿಂದಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಲ್ಲದೇ ಏಪ್ರಿಲ್‌ನಲ್ಲಿ ಅವರು ಕಣ್ಣಿನ ಶಸ್ತ್ರ ಚಿಕಿತ್ಸೆಗೂ ಒಳಗಾಗಿದ್ದರು ಎಂದು ತಿಳಿದುಬಂದಿದೆ.
ಆರು ದಶಕಗಳ ವೃತ್ತಿಜೀವನದಲ್ಲಿ ಧರ್ಮೇಂದ್ರ ಅವರು ಹಿಂದಿ ಚಿತ್ರರಂಗದಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ. 1960ರಲ್ಲಿ ದಿಲ್ ಭೀ ತೇರಾ ಹಮ್ ಭಿ ತೇರೆ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು. ಅಲ್ಲಿಂದ ಪ್ರಾರಂಭವಾಗಿ ಬಂದಿನಿ , ಅನುಪಮಾ, ಶೋಲೆ, ಚುಪ್ಕೆ ಚುಪ್ಕೆ, ಮೇರಾ ಗಾಂವ್ ಮೇರಾ ದೇಶ್ ಮತ್ತು ಡ್ರೀಮ್ ಗರ್ಲ್ ಸಿನಿಮಾಗಳಲ್ಲಿ ನಟಿಸಿದರು.
ಇದನ್ನೂ ಓದಿ : ಉಡುಪಿ | ನಕಲಿ ಚಿನ್ನ ಅಡವಿಟ್ಟು ವಂಚಿಸಿದ ಪ್ರಕರಣ ; ಐವರು ಆರೋಪಿಗಳು ಅರೆಸ್ಟ್..!



















