ಮೈಸೂರು: ದೆಹಲಿಯಲ್ಲಿ ಬಾಂಬ್ ಸ್ಪೋಟವಾಗಿರುವ ಹಿನ್ನೆಲೆಯಲ್ಲಿ ಇಡೀ ರಾಜ್ಯದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇಂದು ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಜಿಲ್ಲಾ ಕೇಂದ್ರಗಳು, ಬೆಂಗಳೂರು ವಿಮಾನ ನಿಲ್ದಾಣ, ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ, ಭದ್ರತೆಯನ್ನು ಬಿಗಿಗೊಳಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ದೆಹಲಿ ಸ್ಪೋಟದಲ್ಲಿ ಕೆಲವರು ಸತ್ತಿರುವ ಬಗ್ಗೆ ಮಾಹಿತಿ ಇದೆ. ಮೈಸೂರು ಪೊಲೀಸರೊಂದಿಗೆ ಈಗಾಗಲೇ ಮಾತನಾಡಿದ್ದು, ರಾಜ್ಯ ಮಟ್ಟದ ಐಜಿಪಿ, ಡಿಜಿಪಿ ಯವರೊಂದಿಗೆ ಕೂಡ ಮಾತನಾಡುತ್ತೇನೆ ಎಂದಿದ್ದಾರೆ.
ಸ್ಪೋಟದಲ್ಲಿ ಮೃತರಾದ ಕುಟುಂಬದವರಿಗೆ ಸಂತಾಪ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ಭದ್ರತಾ ಲೋಪವಾಗಿದೆಯೇ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಸ್ಪೋಟದ ಬಗ್ಗೆ ಪೂರ್ಣ ಮಾಹಿತಿ ಇಲ್ಲವಾದ್ದರಿಂದ ಈ ಬಗ್ಗೆ ಮಾಹಿತಿ ಪಡೆದು ನಂತರ ಪ್ರತಿಕ್ರಿಯೆ ನೀಡುತ್ತೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ದೆಹಲಿ ಸ್ಫೋಟಕ್ಕೆ ದೇಶಾದ್ಯಂತ ಕಂಬನಿ: ರಾಷ್ಟ್ರಪತಿಯಿಂದ ರಾಹುಲ್‌ವರೆಗೆ ಸಂತಾಪ, ತನಿಖೆಗೆ ಖರ್ಗೆ ಆಗ್ರಹ



















