ಕೊಡಗು : ಇತ್ತೀಚೆಗೆ ರಾಜ್ಯದಲ್ಲಿ ಕಾಡು ಪ್ರಾಣಿಗಳ ದಾಳಿಗೆ ಹಲವರು ಬಲಿಯಾಗುತ್ತಲೇ ಇದ್ದಾರೆ. ರಾಜ್ಯದಲ್ಲಿ ಕಾಡಾನೆ ಮತ್ತು ಹುಲಿ ದಾಳಿಯಿಂದಾಗಿ ಹಲವು ರೈತರು ಮೃತಪಟ್ಟ ಘಟನೆಗಳು ಜನರಲ್ಲಿ ಆತಂಕ ಮೂಡಿಸಿರುವ ಬೆನ್ನಲ್ಲೇ ಮತ್ತೊಂದೆ ಇಂಥದ್ದೇ ಘಟನೆ ಕೊಡಗಿನಲ್ಲಿ ಕೇಳಿಬಂದಿದೆ.
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಪಾಲಿಬೆಟ್ಟ ಬಳಿಯ ಎಮ್ಮೆಗುಂಡಿ ತೋಟದಲ್ಲಿ ಸೋಮವಾರ (ನ.10) ಕಾಡು ಆನೆಯೊಂದು ದಾಳಿ ಮಾಡಿದ ಪರಿಣಾಮ ಕಾರ್ಮಿಕನೊಬ್ಬ ಮೃತಪಟ್ಟಿದ್ದಾನೆ.
ಒಂದೇ ತಿಂಗಳಲ್ಲಿ ಕಾಡು ಪ್ರಾಣಿಗಳಿಗೆ ಹಲವು ಜೀವಗಳು ಬಲಿ
ಕೆಲ ತಿಂಗಳುಗಳಿಂದ ಕಾಡು ಪ್ರಾಣಿಗಳ ದಾಳಿಯಿಂದಾಗಿ ರಾಜ್ಯದಲ್ಲಿ ಹಲವು ಸಾವುಗಳು ಸಂಭವಿಸಿದ್ದು, ರಾಜ್ಯದ ಜನರ ನಿದ್ದೆಗೆಡಿಸಿದೆ. ಕಳೆದ ತಿಂಗಳು ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಯಿಂದ ರೈತ ಗಣೇಶ (55)ಮತ್ತು ನಿಂಗಯ್ಯ(65) ಪ್ರತ್ಯೇಕ ಘಟನೆಗಳಲ್ಲಿ ಮೃತಪಟ್ಟಿದ್ದರು. ಅಷ್ಟೇ ಅಲ್ಲದೆ ಆನೆ ತುಳಿತಕ್ಕೆ ಹಾಡಿ ನಿವಾಸಿ ವಸಂತ್(36) ಎನ್ನುವವರೂ ಬಲಿಯಾಗಿದ್ದರು. ಚಿಕ್ಕಮಗಳೂರು ಜಿಲ್ಲೆಯ ಕೆರೆಕಟ್ಟೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದರು. ಇದರಿಂದಾಗಿ ಅರಣ್ಯ ಇಲಾಖೆಯ ವಿರುದ್ಧ ಗ್ರಾಮಸ್ಥರು ಸಿಡಿದೆದ್ದಿದ್ದರು.
ಇದನ್ನೂ ಓದಿ : ದೆಹಲಿ ಸ್ಫೋಟ ಬೆನ್ನಲ್ಲೇ ಕೊಪ್ಪಳದಲ್ಲಿ ಕಟ್ಟೆಚರ | ಪೋಲಿಸ್ ಕಾರ್ಯಾಚರಣೆ ವೇಳೆ ಗಾಂಜಾ ಪತ್ತೆ



















