ಬೆಂಗಳೂರು: ನೀವು ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು, ಕೈತುಂಬ ಸಂಬಳ ಇರುವ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ನಾರ್ತ್ ಈಸ್ಟರ್ನ್ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NEEPCO Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 30 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ನಾರ್ತ್ ಈಸ್ಟರ್ನ್ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NEEPCO)
ಒಟ್ಟು ಹುದ್ದೆಗಳು: 30
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 17
ಉದ್ಯೋಗ ಸ್ಥಳ: ದೇಶಾದ್ಯಂತ
ಎಲೆಕ್ಟ್ರಿಕಲ್, ಸಿವಿಲ್ ಹಾಗೂ ಐಟಿ ವಿಭಾಗದಲ್ಲಿ ಎಕ್ಸಿಕ್ಯೂಟಿವ್ ಟ್ರೈನಿಯಾಗಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಡಿಗ್ರಿ, ಬಿಇ ಅಥವಾ ಬಿ.ಟೆಕ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಕನಿಷ್ಠ 18ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ನೇಮಕಾತಿ ಹೊಂದಿದವರಿಗೆ ಮಾಸಿಕ 1.6 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಗೇಟ್ ಪರೀಕ್ಷೆಯ ಅಂಕಗಳ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಎಸ್ಸಿ, ಎಸ್ಟಿ ಸಮುದಾಯದವರಿಗೆ 5 ವರ್ಷ ಹಾಗೂ ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಉಳಿದವರಿಗೆ 560 ರೂ. ಇದೆ. ಅರ್ಜಿ ಸಲ್ಲಿಸುವವರು ಮೊದಲಿಗೆ neepco.co.in ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಟ್ಟುಕೊಳ್ಳಬೇಕು.
ಇಸನ್ನೂ ಓದಿ: ದೆಹಲಿ ಸ್ಫೋಟ ಬೆನ್ನಲ್ಲೇ ಕೊಪ್ಪಳದಲ್ಲಿ ಕಟ್ಟೆಚರ | ಪೋಲಿಸ್ ಕಾರ್ಯಾಚರಣೆ ವೇಳೆ ಗಾಂಜಾ ಪತ್ತೆ



















