ಬೆಂಗಳೂರು: ದೇಶದ ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾಗಿರುವ ಇಂಡಿಯನ್ ಬ್ಯಾಂಕ್ ನಲ್ಲಿ (Indian Bank Recruitment 2025) ಖಾಲಿ ಇರುವ 8 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಫೈರ್ ಸೇಫ್ಟಿ ಆಫೀಸರ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ. ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಯ ವಿವರ ಈ ಕೆಳಗಿನಂತಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಬ್ಯಾಂಕ್
ಹುದ್ದೆ ಹೆಸರು: ಫೈರ್ ಸೇಫ್ಟಿ ಆಫೀಸರ್ ಇತ್ಯಾದಿ
ಒಟ್ಟು ಹುದ್ದೆಗಳು: 8
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 21
ಕರ್ನಾಟಕದ ಬೆಂಗಳೂರು, ಮಹಾರಾಷ್ಟ್ರದ ಮುಂಬೈ, ನವದೆಹಲಿ, ಉತ್ತರ ಪ್ರದೇಶದ ಲಖನೌ ಸೇರಿ ದೇಶದ ಹಲವು ಭಾಗಗಳಲ್ಲಿರುವ ಇಂಡಿಯನ್ ಬ್ಯಾಂಕ್ ಬ್ರ್ಯಾಂಚ್ ಗಳಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ, ಬಿಎ, ಬಿಎಸ್ಸಿ, ಬಿ.ಎಡ್, ಬಿಇ, ಬಿ ಟೆಕ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರು.
ಕನಿಷ್ಠ 23ರಿಂದ ಗರಿಷ್ಠ 40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಎಸ್ಸಿ, ಎಸ್ಟಿ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 175 ರೂಪಾಯಿ ಅರ್ಜಿ ಶುಲ್ಕವಿದ್ದರೆ, ಉಳಿದವರಿಗೆ 1 ಸಾವಿರ ರೂ. ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು indianbank.bank.in ಗೆ ಭೇಟಿ ನೀಡಿ ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
Chief General Manager (CDO & CLO), Indian Bank, Corporate Office, HRM Department, Recruitment Section 254-260, Avvai Shanmugam Salai, Royapettah, Chennai, Pin – 600 014, Tamil Nadu.
ಇದನ್ನೂ ಓದಿ:ಕೇಂದ್ರ ಸರ್ಕಾರದ NEEPCO ಸಂಸ್ಥೆಯಲ್ಲಿ 30 ಹುದ್ದೆಗಳ ನೇಮಕ: 1.6 ಲಕ್ಷ ರೂ. ಸ್ಯಾಲರಿ



















