ನವದೆಹಲಿ : ಕೆಂಪು ಕೋಟೆ ಬಳಿ ಬಾಂಬ್ ಸ್ಫೋಟ ದುರಂತದಲ್ಲಿ 12 ಮಂದಿ ಸಾವನ್ನಪ್ಪಿದ್ದು, ಇದೀಗ ಮೃತರ ಕುಟುಂಬಗಳಿಗೆ ದೆಹಲಿ ಸಿಎಂ ರೇಖಾ ಗುಪ್ತಾ ಅವರು ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಇನ್ನು, ಸ್ಫೋಟದಲ್ಲಿ ಶಾಶ್ವತವಾಗಿ ಅಂಗವಿಕಲರಾದವರಿಗೆ 5 ಲಕ್ಷ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ಪರಿಹಾರ ನೀಡುವುದಾಗಿ ಸಿಎಂ ರೇಖಾ ಗುಪ್ತಾ ತಿಳಿಸಿದ್ದಾರೆ. ಹಾಗೆಯೇ ಆಸ್ಪತ್ರೆಗಳಿಗೆ ತೆರಳಿ ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿದ್ದಾರೆ.
ಹಿನ್ನೆಲೆ |
ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ 1ರ ಬಳಿ ಸೋಮವಾರ (ನ.10) ಸಂಜೆ 6:45ರ ಸುಮಾರಿಗೆ ಸಂಭವಿಸಿದ ಭಾರೀ ಸ್ಫೋಟದಲ್ಲಿ 12 ಜನರು ಸಾವನ್ನಪ್ಪಿದ್ದು, 24 ಜನರು ಗಾಯಗೊಂಡಿದ್ದಾರೆ. ಸ್ಫೋಟದಿಂದಾಗಿ ಆರು ಕಾರುಗಳು, ಎರಡು ಇ-ರಿಕ್ಷಾಗಳು ಮತ್ತು ಒಂದು ಆಟೋರಿಕ್ಷಾ ಬೆಂಕಿಗಾಹುತಿಯಾಗಿವೆ. ಸದ್ಯ ರಾಜಧಾನಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಫೋಟದ ಕಾರಣ ಮತ್ತು ಉದ್ದೇಶವನ್ನು ಪತ್ತೆಹಚ್ಚಲು ಎನ್‌ಐಎ ತನಿಖೆ ನಡೆಸುತ್ತಿದೆ.
ಇದನ್ನೂ ಓದಿ : ಬಿಹಾರ ಎಕ್ಸಿಟ್ ಪೋಲ್ ರಿಸಲ್ಟ್ ಔಟ್ | ಯಾರಿಗೆ ಎಷ್ಟು ಸ್ಥಾನ? ಇಲ್ಲಿದೆ ಮಾಹಿತಿ


















