ಬೆಂಗಳೂರು : ನಮ್ಮ ಮೆಟ್ರೋ ಹಳದಿ ಮಾರ್ಗದ ಒಂದು ರೈಲಿನಲ್ಲಿ ತಾಂತ್ರಿಕ ತೊಂದರೆ ಉಂಟಾಗಿದ್ದು, ಪರಿಣಾಮವಾಗಿ ಈ ಮಾರ್ಗದಲ್ಲಿ ಸಂಚಾರ ವ್ಯತ್ಯಯವಾಗುವ ಸಾಧ್ಯತೆ ಇದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.
ಬುಧವಾರ ಬೆಳಗ್ಗೆ ಜನರು ಕಚೇರಿ, ಕೆಲಸ ಕಾರ್ಯಗಳಿಗೆ ತೆರಳುವ ಸಮಯದಲ್ಲೇ ಈ ಅನಾನುಕೂಲತೆ ಉಂಟಾಗಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ವಿಷಾದಿಸುತ್ತೇವೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ. ಎಂದು ಬಿಎಂಆರ್‌ಸಿಎಲ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.
‘ಹಳದಿ ಮಾರ್ಗದ ಒಂದು ರೈಲಿನಲ್ಲಿ ತಾಂತ್ರಿಕ ತೊಂದರೆ ಉಂಟಾದ ಕಾರಣ, ರೈಲು ಸಂಚಾರದಲ್ಲಿ ವಿಳಂಬ ಉಂಟಾಗುವ ಸಾಧ್ಯತೆ ಇದೆ. ನಮ್ಮ ಮೆಟ್ರೋ ಪ್ರಯಾಣಿಕರ ಮಾಹಿತಿಗಾಗಿ ತಿಳಿಸಲಾಗಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ವಿಷಾದಿಸುತ್ತೇವೆ’ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದೆ.
ನಮ್ಮ ಮೆಟ್ರೋ ಯೆಲ್ಲೋ ಲೈನ್ನಲ್ಲಿ ಇತ್ತೀಚೆಗಷ್ಟೇ ಐದನೇ ರೈಲು ಸಂಚಾರ ಶುರುವಾಗಿತ್ತು. ಇದರಿಂದಾಗಿ ಪ್ರತಿ 15 ನಿಮಿಷಕ್ಕೆ ಒಂದು ರೈಲು ಸಂಚಾರ ಮಾಡುವಂತೆ ಆಗಿದ್ದು, ಪ್ರಯಾಣಿಕರಿಗೂ ಅನುಕೂಲವಾಗಿತ್ತು.
ಇದನ್ನೂ ಓದಿ : ಮಾಲೂರು ಮರು ಮತ ಎಣಿಕೆ ಮುಕ್ತಾಯ – ನಾಳೆ ಸುಪ್ರೀಂಗೆ ವರದಿ ಸಲ್ಲಿಕೆ



















