ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಮೈಸೂರಿನಲ್ಲಿಯೇ ಕೇಂದ್ರ ಕಚೇರಿ ಹೊಂದಿರುವ ಸೆಂಟ್ರಲ್ ಫುಡ್ ಟೆಕ್ನಾಲಜಿಕಲ್ ರಿಸರ್ಚ್ ಇನ್ ಸ್ಟಿಟ್ಯೂಟ್ (CFTRI Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 2 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಇದರೊಂದಿಗೆ ಕರ್ನಾಟಕದ ಮೈಸೂರಿನಲ್ಲಿಯೇ ಉದ್ಯೋಗ ಹುಡುಕುತ್ತಿರುವವರಿಗೆ ಇದು ಗುಡ್ ನ್ಯೂಸ್ ಆಗಿದೆ.
ನೇಮಕಾತಿ ಸಂಸ್ಥೆ: ಸೆಂಟ್ರಲ್ ಫುಡ್ ಟೆಕ್ನಾಲಜಿಕಲ್ ರಿಸರ್ಚ್ ಇನ್ ಸ್ಟಿಟ್ಯೂಟ್ (CFTRI)
ಒಟ್ಟು ಹುದ್ದೆಗಳು: 02
ಉದ್ಯೋಗ ಸ್ಥಳ: ಮೈಸೂರು, ಕರ್ನಾಟಕ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 17
ಎರಡು ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಬಿ.ಇ, ಬಿ.ಟೆಕ್, ಎಂಎಸ್ಸಿ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲನೆ ನಡೆಸಿ, ಮೆರಿಟ್ ಲಿಸ್ಟ್ ಬಿಡುಗಡೆ ಮಾಡಲಾಗುತ್ತದೆ. ಇದಾದ ಬಳಿಕ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ cftri.res.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಬೇಕು.
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆದು, ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ; ಕರ್ನಾಟಕಕ್ಕೆ ಜಯ.. ಮೇಕೆದಾಟು ಯೋಜನೆ ಪ್ರಶ್ನಿಸಿದ್ದ ತಮಿಳುನಾಡಿನ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಜಾ!



















