ಬೆಂಗಳೂರು : ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಉದ್ಯಮಿ ಸುಧಾಮೂರ್ತಿ ಹಾಗೂ ಕಿರಣ್ ಮಜುಂದಾರ್ ಶಾ ಭರ್ಜರಿ ಸ್ಟೆಪ್ ಹಾಕಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಉದ್ಯಮಿ ಕಿರಣ್ ಮಜುಂದಾರ್ ಷಾ ಅವರ ಸೋದರಳಿಯನ ಮದುವೆ ಸಮಾರಂಭದಲ್ಲಿ ಸುಧಾಮೂರ್ತಿ ಅವರು ಸ್ಟೆಪ್ ಹಾಕಿದ್ದು, ಈ ವೇಳೆ ಸುಧಾಮೂರ್ತಿ ಹಾಗೂ ಕಿರಣ್ ಮಜುಂದಾರ್ ಷಾ ಅವರು ಕುಣಿದು ಕುಪ್ಪಳಿಸಿದ್ದಾರೆ.
ಪಂಜಾಬಿ ಡೋಲ್ ನಾದಕ್ಕೆ ಉದ್ಯಮಿಗಳಿಬ್ಬರು ಸಖತ್ ಸ್ಟೆಪ್ ಹಾಕಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಸುಧಾಮೂರ್ತಿ ಗುಲಾಬಿ ಬಣ್ಣದ ಸೀರೆಯಲ್ಲಿ ಕಾಣಿಸಿಕೊಂಡರೆ, ಚಿನ್ನದ ಬಣ್ಣದ ಸೀರೆಯಲ್ಲಿ ಕಿರಣ್ ಮಜುಂದಾರ್ ಷಾ ಕಾಣಿಸಿಕೊಂಡಿದ್ದಾರೆ.
ಇದನ್ನೂ ಓದಿ : ಶಾಸಕ ಸತೀಶ್ ಸೈಲ್ ವೈದ್ಯಕೀಯ ಜಾಮೀನು ನ.20ರವರೆಗೆ ವಿಸ್ತರಣೆ!



















