ಬೆಂಗಳೂರು : ರಾಜ್ಯದಲ್ಲಿ ಒಣ ಹವೆಯ ವಾತಾವರಣ ಶುಕ್ರವಾರವೂ ಮುಂದುವರಿದಿದೆ. ಇನ್ನು ಚಳಿಯ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂದಿನ 3 ದಿನಗಳವರೆಗೆ ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ತೀವ್ರ ಶೀತ ಗಾಳಿ ಬೀಸುವ ಸಾಧ್ಯತೆಯಿದ್ದು, ಜನರು ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ಆಕಾಶ ಇರಲಿದ್ದು, ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿಗ್ರಿ ಸೆ. ಮತ್ತು 20 ಡಿಗ್ರಿ ಸೆ. ಇರಬಹುದು.
ನ.15 ಮತ್ತು 16ರಂದು ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ. ಇನ್ನು ನ.17 ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಕೋಲಾರ, ತುಮಕೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ನ.18ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಕೋಲಾರ, ತುಮಕೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ಇದನ್ನೂ ಓದಿ : ದಾಂಪಾತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ‘ಲಕುಮಿʼ ನಟಿ ಸುಷ್ಮಾ ಶೇಖರ್



















