ಮಂಗಳೂರು : ಪಣಂಬೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪಣಂಬೂರು ಸಿಗ್ನಲ್ ಬಳಿ ಈ ಅಪಘಾತ ಸಂಭವಿಸಿದ್ದು, ಸಿಗ್ನಲ್‌ನಲ್ಲಿ ಸರತಿಯಲ್ಲಿದ್ದ ವೇಳೆ ಎರಡು ಟ್ಯಾಂಕರ್, ಆಟೋ ರಿಕ್ಷಾ ಮತ್ತು ಕಾರು ಅಪಘಾತಕ್ಕೀಡಾಗಿವೆ.

ಸಿಗ್ನಲ್‌ನಲ್ಲಿ ನಿಂತಿದ್ದ ಟ್ಯಾಂಕರ್‌ವೊಂದರ ಹಿಂಭಾಗದಲ್ಲಿ ಕಾರು ಮತ್ತು ಆಟೋ ನಿಂತಿತ್ತು. ಈ ವೇಳೆ ಹಿಂದಿನಿಂದ ಬಂದ ಇನ್ನೊಂದು ಟ್ಯಾಂಕರ್ ಆಟೋಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಟೋ ಎದುರಿನಲ್ಲಿ ನಿಂತಿದ್ದ ಕಾರಿಗೆ ಅಪ್ಪಳಿಸಿ ಬಳಿಕ ಅದರ ಮುಂದೆ ನಿಂತಿದ್ದ ಮತ್ತೊಂದು ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ.

ಈ ವೇಳೆ ಆಟೋ ಎರಡು ಟ್ಯಾಂಕರ್‌ಗಳ ಮಧ್ಯೆ ಸಿಲುಕಿ ಅಪ್ಪಚ್ಚಿಯಾಗಿದೆ. ಆಟೋದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಮತ್ತು ಆಟೋ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಡಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಮಣ್ಣಲ್ಲಿ ಮಣ್ಣಾದ ವೃಕ್ಷಮಾತೆ | ಜ್ಞಾನಭಾರತಿ ಕಲಾಗ್ರಾಮದಲ್ಲಿ ನೆರವೇರಿತು ಸಾಲುಮರದ ತಿಮ್ಮಕ್ಕನ ಅಂತ್ಯಕ್ರಿಯೆ!



















