ಮಂಗಳೂರು : ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿಇಂದಿನಿಂದ 5 ದಿನಗಳ ಕಾಲ ಲಕ್ಷದೀಪೋತ್ಸವ ನಡೆಯಲಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವವು ಇಂದಿನಿಂದ ನವೆಂಬರ್ 20ರವರೆಗೆ ನಡೆಯಲಿದ್ದು, ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ದೇವಾಲಯವನ್ನು ಸಂಪೂರ್ಣವಾಗಿ ಅಲಂಕರಿಸಲಾಗಿದೆ. ಲಕ್ಷಾಂತರ ಭಕ್ತರನ್ನು ಆಕರ್ಷಿಸುವ ಈ ಪ್ರಸಿದ್ಧ ಉತ್ಸವದಲ್ಲಿ ಲಕ್ಷಾಂತರ ಜನರು ಪಾಲ್ಗೊಳ್ಳಲಿದ್ದಾರೆ.

ಇಂದು ಹೊಸಕಟ್ಟೆ ಉತ್ಸವ, ನವೆಂಬರ್ 16ರಂದು ಕೆರೆಕಟ್ಟೆ ಉತ್ಸವ, ನವೆಂಬರ್ 17ರಂದು ಲಲಿತೋದ್ಯಾನ ಉತ್ಸವ, ನವೆಂಬರ್ 18ರಂದು ಕಂಚಿಮಾರುಕಟ್ಟೆ ಉತ್ಸವ ಮತ್ತು ನವೆಂಬರ್ 19ರಂದು ಗೌರಿಮಾರುಕಟ್ಟೆ ಉತ್ಸವ ನಡೆಯಲಿದೆ. ನವೆಂಬರ್ 20ರಂದು ಬೆಳಿಗ್ಗೆ ಲಕ್ಷದೀಪೋತ್ಸವ ಮುಕ್ತಾಯಗೊಳ್ಳಲಿದ್ದು, ಸಂಜೆ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ ನಡೆಯಲಿದೆ.

ನವೆಂಬರ್ 18 ಹಾಗೂ 19ರಂದು 93ನೇ ಸರ್ವಧರ್ಮ ಹಾಗೂ ಸಾಹಿತ್ಯ ಸಮ್ಮೇಳನ ನಡೆಯಲಿದೆ. ನವೆಂಬರ್ 19ರಂದು ಮಂಜುನಾಥ ಸ್ವಾಮಿಯ ಮಹಾ ರಥೋತ್ಸವ ನಡೆಯಲಿದೆ. ಲಕ್ಷದೀಪೋತ್ಸವದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಇದನ್ನೂ ಓದಿ : ‘ಕನ್ನಡ ಪ್ರೀತಿ’ಯಲ್ಲೇ ಅಣ್ಣಮ್ಮ ದೇವಿ ಅದ್ದೂರಿ ತೇರು.. 3 ದಿನಗಳ ಉತ್ಸವಕ್ಕೆ ಆಮಂತ್ರಣ!



















