ಬೆಂಗಳೂರು: ಕೇಂದ್ರ ಸರ್ಕಾರದ ಹುದ್ದೆಗಳನ್ನು ಹುಡುಕುತ್ತಿರುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕರ್ನಾಟಕದ ಮಂಗಳೂರಿನಲ್ಲಿರುವ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL Recruitment 2025) ಸಂಸ್ಥೆಯಲ್ಲಿರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಗ್ರಾಜ್ಯುಯೇಟ್ ಹಾಗೂ ಟೆಕ್ನಿಶಿಯನ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಹುದ್ದೆಗಳ ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)
ಒಟ್ಟು ಹುದ್ದೆಗಳು: ವಿವಿಧ
ಹುದ್ದೆಗಳ ಹೆಸರು: ಗ್ರಾಜ್ಯುಯೇಟ್ ಹಾಗೂ ಟೆಕ್ನಿಶಿಯನ್ ಅಪ್ರೆಂಟಿಸ್
ನೇಮಕಾತಿ ವಿಧಾನ: ಸಂದರ್ಶನ
ನೇರ ಸಂದರ್ಶನದ ದಿನಾಂಕ: ಡಿಸೆಂಬರ್ 5
ಗ್ರಾಜ್ಯುಯೇಟ್ ಅಪ್ರೆಂಟಿಸ್ ಟ್ರೈನಿ ಹಾಗೂ ಟೆಕ್ನಿಶಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಬಿಇ, ಬಿ.ಟೆಕ್ ಹಾಗೂ ಡಿಪ್ಲೋಮಾ ಕೋರ್ಸ್ ಗಳನ್ನು ಮುಗಿಸಿದವರು ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.
2021 ಹಾಗೂ 2025ರ ಅವಧಿಯಲ್ಲಿ ಕೋರ್ಸ್ ಗಳನ್ನು ಮುಗಿಸಿದವರು ಮಾತ್ರ ಸಂದರ್ಶನಕ್ಕೆ ಹಾಜರಾಗಲು ಅರ್ಹರು. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು mrpl.co.in ಗೆ ಭೇಟಿ ನೀಡಿ, ಅಧಿಸೂಚನೆ ಓದಬೇಕು. ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸದಲ್ಲಿ ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಸಂದರ್ಶನದ ಸ್ಥಳ
Sahyadri College of Engineering & Management, Sahyadri Campus, Adyar, Mangalore, Karnataka – 575 007
ಇದನ್ನೂ ಓದಿ: ತುಮಕೂರಿಗೆ ನಮ್ಮ ಮೆಟ್ರೋ ವಿಸ್ತರಣೆ | ಡಿಪಿಆರ್ ತಯಾರಿಸಲು ಟೆಂಡರ್ ಕರೆದ BMRCL



















