ಬಿಹಾರ : ಎನ್‌ಡಿಎ ಮೈತ್ರಿ ಕೂಟದ ಪ್ರಚಂಡ ಗೆಲುವಿನ ನಂತರ ನವೆಂಬರ್ 20ರಂದು ಸತತ 10ನೇ ಬಾರಿಗೆ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿಯಾಗಿ ಸಂಭ್ರಮಿಸಲಿದ್ದಾರೆ.
ಮೋದಿ ಅವರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವರು ಹಾಗೂ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಕೂಡ ಸಮಾರಂಭದಲ್ಲಿ ಪಾಲ್ಗೊಳ್ಳುವರು ಎಂದು ಮೂಲಗಳು ತಿಳಿಸಿವೆ.
ಈ ಕಾರ್ಯಕ್ರಮವು ರಾಜ್ಯ ಭವನದ ಬದಲಾಗಿ, ರಾಜ್ಯದ ಗಾಂಧಿ ಮೈದಾನದಲ್ಲಿ ಜರುಗಲಿದೆ.
ಇದನ್ನೂ ಓದಿ : ಬ್ಯಾಂಕ್ ಆಫ್ ಇಂಡಿಯಾದಲ್ಲಿ 115 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂ. ಸಂಬಳ



















