ನವದೆಹಲಿ : ಸಿಎಂ ಸಿದ್ದರಾಮಯ್ಯ ಇಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ನರೇಂದ್ರ ಮೋದಿ ಮತ್ತು ಸಿದ್ದರಾಮಯ್ಯ ನಡುವೆ ಸುಮಾರು ಅರ್ಧ ಗಂಟೆಗಳ ಕಾಲ ಮಹತ್ವದ ಚರ್ಚೆ ನಡೆದಿದೆ.
ರಾಜ್ಯದ ಐದು ಪ್ರಮುಖ ವಿಚಾರಗಳ ಬಗ್ಗೆ ನರೇಂದ್ರ ಮೋದಿ ಅವರೊಂದಿಗೆ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ. ರಾಜ್ಯದಲ್ಲಿ ಕಾಗ್ರೆಂಸ್ ಸರ್ಕಾರ ಅಧಿಕಾರಕ್ಕೆ ಬಂದರ ನಂತರ ಸಿದ್ದರಾಮಯ್ಯ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿದ್ದು, ಆ ಬಳಿಕ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ.
ಸುದ್ದಿಗೋಷ್ಠಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಕೃಷ್ಣ ಬೈರೈಗೌಡ ಒಟ್ಟಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದೇವೆ. ನರೇಂದ್ರ ಮೋದಿ ಅವರೊಂದಿಗೆ ಐದು ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದು, ಮನವಿ ಪತ್ರಗಳನ್ನು ನೀಡಿದ್ದೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಮಂಗಳೂರು | ಮಹಿಳೆಗೆ ಲೈಂಗಿಕ ಕಿರುಕುಳಕ್ಕೆ ಯತ್ನ ; ಆರೋಪಿ ಅರೆಸ್ಟ್



















