ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿರುವ ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ 224 ಹುದ್ದೆಗಳ ನೇಮಕಾತಿಗಾಗಿ (BWSSB Recruitment 2025) ಅಧಿಸೂಚನೆ ಹೊರಡಿಸಲಾಗಿದೆ. ಅಸಿಸ್ಟಂಟ್ ಎಂಜಿನಿಯರ್, ಜೂನಿಯರ್ ಎಂಜಿನಿಯರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ
ಒಟ್ಟು ಹುದ್ದೆಗಳು: 224
ಜೂನಿಯರ್ ಎಂಜಿನಿಯರ್: ಅಸಿಸ್ಟಂಟ್ ಎಂಜಿನಿಯರ್, ಜೂನಿಯರ್ ಎಂಜಿನಿಯರ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 25
ಸಿವಿಲ್, ಎಲೆಕ್ಟ್ರಿಕಲ್, ಮೆಕ್ಯಾನಿಕಲ್, ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಅಸಿಸ್ಟಂಟ್ ಎಂಜಿನಿಯರ್ ಹಾಗೂ ಸಿವಿಲ್, ಎಲೆಕ್ಟ್ರಿಕಲ್, ಮೆಕ್ಯಾನಿಕಲ್ ವಿಭಾಗದಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕಾತಿ ನಡೆಯಲಾಗುತ್ತಿದೆ. ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪಿಯುಸಿ, ಡಿಗ್ರಿ, ಡಿಪ್ಲೋಮಾ, ಬಿಇ, ಬಿ.ಟೆಕ್ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 53,250 ರೂಪಾಯಿಯಿಂದ 1.15 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಕನಿಷ್ಠ 18 ವರ್ಷದಿಂದ ಗರಿಷ್ಠ 38 ವರ್ಷದೊಳಗಿನವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. 2ಎ, 2ಬಿ, 3ಎ, 3 ಬಿ ವರ್ಗದವರಿಗೆ 3 ವರ್ಷ, ಎಸ್ಸಿ, ಎಸ್ಟಿ ಸಮುದಾಯದವರಿಗೆ 5 ವರ್ಷಗಳವರೆಗೆ ವಿನಾಯಿತಿ ನೀಡಲಾಗಿದೆ. ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವವರು cetonline.karnataka.gov.in ಗೆ ಭೇಟಿ ನೀಡಬಹುದು.
ಇದನ್ನೂ ಓದಿ: ಬೆಂಗಳೂರಿನ IIScಯಲ್ಲಿ ಸಿಸ್ಟಮ್ ಎಂಜಿನಿಯರ್ ಹುದ್ದೆಗಳ ನೇಮಕಾತಿ : 51 ಸಾವಿರ ರೂ. ಸಂಬಳ



















