ಬೆಂಗಳೂರು: ಈಗಷ್ಟೇ ಪದವಿ ಮುಗಿಸಿ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೋಚಿಂಗ್ ಪಡೆದು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಬ್ಯಾಂಕ್ ಆಫ್ ಬರೋಡಾದಲ್ಲಿ (BOB Recruitment 2025) ಖಾಲಿ ಇರುವ 2,700 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅಪ್ರೆಂಟಿಸ್ ಹುದ್ದೆಗಳನ್ನು ಬ್ಯಾಂಕ್ ಭರ್ತಿ ಮಾಡಿಕೊಳ್ಳುತ್ತಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಬ್ಯಾಂಕ್ ಆಫ್ ಬರೋಡಾ
ಒಟ್ಟು ಹುದ್ದೆಗಳು: 2,700
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಡಿಸೆಂಬರ್ 1
ಉದ್ಯೋಗದ ಸ್ಥಳ: ದೇಶಾದ್ಯಂತ
ವಿದ್ಯಾರ್ಹತೆ ಏನು?
ದೇಶಾದ್ಯಂತ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಕರ್ನಾಟಕದಲ್ಲೂ 440 ಹುದ್ದೆಗಳಿವೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಆನ್ ಲೈನ್ ಟೆಸ್ಟ್, ದಾಖಲೆ ಪರಿಶೀಲನೆ ಹಾಗೂ ಸ್ಥಳೀಐ ಭಾಷೆ ಮೇಲಿನ ಹಿಡಿತದ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಎಸ್ಸಿ, ಎಸ್ಟಿ, ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಜನರಲ್, ಒಬಿಸಿ, ಇಡಬ್ಲ್ಯೂಎಸ್ ನವರಿಗೆ 800 ರೂ. ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಅಪ್ರೆಂಟಿಸ್ ಅವಧಿಯಲ್ಲಿ ಮಾಸಿಕ 15 ಸಾವಿರ ರೂ. ಸ್ಟೈಪೆಂಡ್ ನೀಡಲಾಗುತ್ತದೆ. ಹೊಸದಾಗಿ ಬ್ಯಾಂಕಿಂಗ್ ಕ್ಷೇತ್ರಕ್ಕೆ ಕಾಲಿಡುತ್ತಿರುವ ಫ್ರೆಶರ್ ಗಳಿಗೆ ಇದು ಒಳ್ಳೆಯ ಅವಕಾಶವಾಗಿದೆ.
ಆನ್ ಲೈನ್ ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ಸೈಟ್ bankofbaroda.bank.inಗೆ ಭೇಟಿ ನೀಡಬೇಕು
ಅಪ್ರೆಂಟಿಸ್ ಹುದ್ದೆಯ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಅರ್ಜಿ ಡೌನ್ ಲೋಡ್ ಮಾಡಿಕೊಳ್ಳಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಇದನ್ನೂಓದಿ : ಪ್ರಧಾನಿ ಮೋದಿ ಪಾದಕ್ಕೆರಗಿ ಆಶೀರ್ವಾದ ಪಡೆದ ನಟಿ ಐಶ್ವರ್ಯಾ ರೈ!



















