ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಹವಾಮಾನ ಇಲಾಖೆಯಲ್ಲಿ ಖಾಲಿ ಇರುವ 134 ಹುದ್ದೆಗಳ ನೇಮಕಾತಿಗಾಗಿ (IMD Recruitment 2025) ಅಧಿಸೂಚನೆ ಹೊರಡಿಸಲಾಗಿದೆ. ಅಡ್ಮಿನ್ ಅಸಿಸ್ಟಂಟ್, ಪ್ರಾಜೆಕ್ಟ್ ಅಸಿಸ್ಟಂಟ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ಹವಾಮಾನ ಇಲಾಖೆ
ಹುದ್ದೆಗಳ ಹೆಸರು: ಅಡ್ಮಿನ್ ಅಸಿಸ್ಟಂಟ್, ಪ್ರಾಜೆಕ್ಟ್ ಅಸಿಸ್ಟಂಟ್
ಒಟ್ಟು ಹುದ್ದೆಗಳು: 134
ಉದ್ಯೋಗ ಸ್ಥಳ: ದೇಶಾದ್ಯಂತಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 14
ಪ್ರಾಜೆಕ್ಟ್ ಸೈಂಟಿಸ್ಟ್ ಇ, ಪ್ರಾಜೆಕ್ಟ್ ಸೈಂಟಿಸ್ಟ್ III, ಪ್ರಾಜೆಕ್ಟ್ ಸೈಂಟಿಸ್ಟ್ II ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಇ, ಬಿ.ಟೆಕ್, ಎಂ.ಇ, ಎಂ.ಟೆಕ್ ಹಾಗೂ ಎಂಎಸ್ಸಿ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 29,200 ರೂಪಾಯಿಯಿಂದ 1.23 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ https://mausam.imd.gov.in/ ಗೆ ಭೇಟಿ ನೀಡಬೇಕು
- ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
- ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
- ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಿ, ಸಲ್ಲಿಸಬೇಕು
- ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಇದನ್ನೂ ಓದಿ : ಕೇಂದ್ರ ಸರ್ಕಾರದ SAIL ಸಂಸ್ಥೆಯಲ್ಲಿ 124 ಹುದ್ದೆಗಳು : ಎಂಜಿನಿಯರಿಂಗ್ ಮುಗಿಸಿದವರಿಗೆ ಗುಡ್ ನ್ಯೂಸ್


















