ಬೆಂಗಳೂರು : ಜೆಡಿಎಸ್ ಪಕ್ಷವು ಅಸ್ತಿತ್ವಕ್ಕೆ ಬಂದು 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ರಜತ ಮಹೋತ್ಸವ ಆಚರಿಸಲು ತೀರ್ಮಾನಿಸಲಾಗಿದೆ.
ಅಂತೆಯೇ ಇಂದು ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ 25ನೇ ವರ್ಷದ ರಜತ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲೇ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ನಿಖಿಲ್ ಕುಮಾರಸ್ವಾಮಿ ಹೆಸರು ಘೋಷಣೆ ಮಾಡುವ ಸಾಧ್ಯತೆಗಳಿವೆ.
ಸದ್ಯ ಜೆಡಿಎಸ್ ರಾಜ್ಯಾಧ್ಯಕ್ಷರಾಗಿರುವ ಎಚ್ಡಿ ಕುಮಾರಸ್ವಾಮಿ ಅವರು ರಾಷ್ಟ್ರ ರಾಜಕಾರಣದಲ್ಲಿದ್ದಾರೆ. ಇದೀಗ ಅವರಿಗೆ ಆಗಾಗ ಆರೋಗ್ಯ ಕೈಕೊಡುತ್ತಿದೆ. ಹೀಗಾಗಿ ಯುವಕ ಘಟಕದ ರಾಜ್ಯಾಧ್ಯಕ್ಷರಾಗಿರುವ ಪುತ್ರ ನಿಖಿಲ್‌ಗೆ ರಾಜ್ಯಾಧ್ಯಕ್ಷ ಪಟ್ಟ ಕಟ್ಟಲು ತೀರ್ಮಾನಿಸಿದ್ದು, ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನ ಕೈಗೊಂಡು ರಜತ ಮಹೋತ್ಸವ ಕಾರ್ಯಕ್ರಮ ಅಧಿಕೃತ ಘೋಷಣೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ : ಕೊಲೆ ಯತ್ನ ಆರೋಪ | ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬಂಧನ



















