ಮಂಗಳೂರು: ಸುರತ್ಕಲ್ ಸಮೀಪದ ಮುಕ್ಕ ಮತ್ತು ಖಂಡಿಗೆ ಬಳಿ ನಂದಿನಿ ನದಿಯ ಅತಿಕ್ರಮಣ ಮತ್ತು ಕಲುಷಿತ ನೀರು ಸೇರ್ಪಡೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತಾಳಿರುವುದನ್ನು ಉಪ ಲೋಕಾಯುಕ್ತರು ಎಚ್ಚರಿಕೆ ನೀಡಿದ್ದಾರೆ.
ಈ ಕೃತ್ಯಕ್ಕೆ ಸಂಬಂಧಿಸಿ ಈಗಾಗಲೇ ಸುಮೊಟೊ ಪ್ರಕರಣ ದಾಖಲಿಸಲಾಗಿದೆ. ಆದರೆ ಎಂಟು ತಿಂಗಳು ಕಳೆದರೂ ಸಮಸ್ಯೆಯನ್ನು ಸರಿಪಡಿಸದ ಕಾರಣ ಡಿ.20ರಂದು ನಡೆಯುವ ವಿಚಾರಣೆಗೆ ಮುನ್ನ ಸೂಕ್ತ ಕ್ರಮ ವಹಿಸದಿದ್ದರೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಎಲ್ಲಾ ಸಮಸ್ಯೆಗಳನ್ನು ಪರಿಶೀಲಿಸಿ ಪ್ರತ್ಯೇಕ ವರದಿ ನೀಡಬೇಕು. ದ.ಕ. ಜಿಲ್ಲಾಧಿಕಾರಿ ಮತ್ತು ಪಾಲಿಕೆ ಆಯುಕ್ತರೂ ಕೂಡ ಸಮಸ್ಯೆ ಬಗೆಹರಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರತ್ಯೇಕ ವರದಿ ತಯಾರಿಸಿ ಸಲ್ಲಿಸಬೇಕು ಎಂದು ಉಪ ಲೋಕಾಯುಕ್ತರು ಸೂಚಿಸಿದ್ದಾರೆ.
ಇದನ್ನೂ ಓದಿ : ನಗರಸಭೆ ನಿರ್ಲಕ್ಷ್ಯ | ಬೈಕ್‌ನಲ್ಲಿ ತೆರಳುವಾಗ ಫ್ಲೆಕ್ಸ್ ತಗುಲಿ ಯವಕ ದಾರುಣ ಸಾವು



















