ಬೆಂಗಳೂರು: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ (UIDAI Recruitment 2025) ಖಾಲಿ ಇರುವ 02 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಎರಡು ಸೀನಿಯರ್ ಅಕೌಂಟ್ಸ್ ಆಫೀಸರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅದರಲ್ಲೂ, ಕರ್ನಾಟಕದ ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಒಳ್ಳೆಯ ಅವಕಾಶವಾಗಿದೆ..
ನೇಮಕಾತಿ ಸಂಸ್ಥೆ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ
ಒಟ್ಟು ಹುದ್ದೆಗಳು: 02
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಹುದ್ದೆಗಳ ಹೆಸರು: ಸೀನಿಯರ್ ಅಕೌಂಟ್ಸ್ ಆಫೀಸರ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 2026ರ ಜನವರಿ 6
ಒಂದು ಸೀನಿಯರ್ ಅಕೌಂಟ್ಸ್ ಆಫೀಸರ್ ಹಾಗೂ ಒಂದು ಅಸಿಸ್ಟಂಟ್ ಅಕೌಂಟ್ ಆಫೀಸರ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಂಬಿಎ, ಸಿಎ, ಎಂ.ಕಾಂ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲಿಗೆ uidai.gov.in ವೆಬ್ ಸೈಟ್ ಗೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು. ನಂತರ ಈ ಕೆಳಗಿನ ವಿಳಾಸಕ್ಕೆ ಅಗತ್ಯ ದಾಖಲೆಗಳೊಂದಿಗೆ ನಿಗದಿತ ಗಡುವಿನೊಳಗೆ ಸಲ್ಲಿಸಬೇಕು. ನೇಮಕಾತಿ ಹೊಂದಿದವರಿಗೆ ಮಾಸಿಕ 56 ಸಾವಿರ ರೂ.ನಿಂದ 1.77 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ
Director (HR), Unique Identification Authority of India (UIDAI), Regional Office, 3rd Floor, South Wing, Khanija Bhavan, No. 49, Race Course Road, Bengaluru – 560 001
ಇದನ್ನೂ ಓದಿ: ನಮ್ಮ ಮೆಟ್ರೋದಲ್ಲಿ ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಯ ನೇಮಕಾತಿ : 62 ಸಾವಿರ ರೂ. ಸ್ಯಾಲರಿ



















