ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ, ಕರ್ನಾಟಕದ ಉಡುಪಿಯಲ್ಲಿರುವ ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ಖಾಲಿ ಇರುವ 16 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಎಲೆಕ್ಟ್ರಾನಿಕ್ ಹಾಗೂ ಎಲೆಕ್ಟ್ರಿಕಲ್ ವಿಭಾಗದಲ್ಲಿ ಖಾಲಿ ಇರುವ ಡಿಪ್ಲೋಮಾ ಎಂಜಿನಿಯರಿಂಗ್ ಟ್ರೈನಿ ಹುದ್ದೆಗಳನ್ನು ಭರ್ತಿ (UCSL Diploma Engineering Trainees Recruitment 2025) ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್
ಹುದ್ದೆಗಳ ಹೆಸರು: ಡಿಪ್ಲೋಮಾ ಎಂಜಿನಿಯರಿಂಗ್ ಟ್ರೈನಿ
ಒಟ್ಟು ಹುದ್ದೆಗಳು: 16
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 18
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಡಿಪ್ಲೋಮಾ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಗರಿಷ್ಠ 25 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಒಬಿಸಿಯವರಿಗೆ 3 ವರ್ಷ ಹಾಗೂ ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಜನರಲ್ ಅಭ್ಯರ್ಥಿಗಳಿಗೆ 600 ರೂಪಾಯಿ ಅರ್ಜಿ ಶುಲ್ಕವಿದ್ದರೆ, ಉಳಿದವರಿಗೆ ವಿನಾಯಿತಿ ನೀಡಲಾಗಿದೆ.
ಐದು ವರ್ಷಗಳವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಮೊದಲ ವರ್ಷದಲ್ಲಿ ಮಾಸಿಕ 20 ಸಾವಿರ ರೂಪಾಯಿ, ದ್ವಿತೀಯ ವರ್ಷದಲ್ಲಿ ಮಾಸಿಕ 23 ಸಾವಿರ ರೂ. ಹಾಗೂ ಸೂಪರ್ ವೈಸರ್ ಆಗಿ ಬಡ್ತಿ ಪಡೆದ ಬಳಿಕ 1.1 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು https://udupicsl.com/ ಗೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ: ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ 33 ಹುದ್ದೆಗಳ ಭರ್ತಿಗೆ ಅರ್ಜಿ: ಕೂಡಲೇ ಅರ್ಜಿ ಸಲ್ಲಿಸಿ



















