ಮುಂಬೈ: ಟೀಂ ಇಂಡಿಯಾದ ಪ್ರಮುಖ ಆಟಗಾರ್ತಿ ಸ್ಮೃತಿ ಮಂಧಾನಾ ಅವರ ವಿವಾಹ ಕಾರ್ಯಕ್ರಮವನ್ನು ಇಂದು ಅವರ ಹುಟ್ಟೂರು ಸಾಂಗ್ಲಿಯಲ್ಲಿ ಆಯೋಜನೆಗೊಂಡಿತ್ತು. ಮದುವೆ ಕಾರ್ಯಕ್ರಮ ನಡೆಯುತ್ತಿದ್ದ ಸಂಧರ್ಭದಲ್ಲೇ ಸ್ಮೃತಿ ಮಂಧಾನಾ ಅವರ ತಂದೆ ಶ್ರೀನಿವಾಸ್ ಅವರಿಗೆ ಲಘು ಹೃದಯಾಘಾತ ಸಂಭವಿಸಿದ ಹಿನ್ನಲೇ ಮದುವೆ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ.
ಸ್ಮೃತಿ ಮಂಧಾನಾ ಮತ್ತು ಸಂಗೀತ ಸಂಯೋಜಕ, ಚಲನಚಿತ್ರ ನಿರ್ಮಾಪಕ ಪಲಾಶ್ ಮುಚ್ಚಲ್ ಅವರ ವಿವಾಹ ಕಾರ್ಯಕ್ರಮ ಭರ್ಜರಿಯಾಗಿ ನಡೆದಿತ್ತು. ಇವರ ವಿವಾಹ ಸಂಭ್ರಮದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಅರಿಶಿನ ಶಾಸ್ತ್ರದ ವಿಡಿಯೋಗಳಿಂದ ಹಿಡಿದು ವಧು ಮತ್ತು ವರನ ತಂಡಗಳ ನಡುವಿನ ಸ್ನೇಹಪರ ಕ್ರಿಕೆಟ್ ಪಂದ್ಯದವರೆಗೆ, ಮದುವೆಗೆ ಮುನ್ನ ಹಲವು ಮನಮೋಹಕ ಕ್ಷಣಗಳು ಅನಾವರಣಗೊಂಡಿವೆ. ಹೊಸದಾಗಿ ಬಿಡುಗಡೆಯಾಗಿರುವ ವಿಡಿಯೋದಲ್ಲಿ, ಸ್ಮೃತಿ ಮತ್ತು ಪಲಾಶ್ ಇಬ್ಬರೂ ಅತ್ಯಂತ ಸುಂದರವಾಗಿ, ಸಂಪೂರ್ಣವಾಗಿ ಕೊರಿಯೋಗ್ರಾಫ್ ಮಾಡಿದ ನೃತ್ಯವನ್ನು ಪ್ರದರ್ಶಿಸಿದ್ದಾರೆ.
ಈ ಮೊದಲು, ಅರಿಶಿನ ಶಾಸ್ತ್ರದಲ್ಲಿ ಸ್ಮೃತಿ ಮತ್ತು ಪಲಾಶ್ ಇಬ್ಬರೂ ಖುಷಿಯಿಂದ ನೃತ್ಯ ಮಾಡಿದ್ದು, ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿಯರು ಸಹ ಸಾಥ್ ನೀಡಿದ್ದಾರೆ, ವಧುವಿನ ತಂಡವಾಗಿ ಹೆಜ್ಜೆ ಹಾಕಿರುವ ದೃಶ್ಯಗಳು ಹೆಚ್ಚು ವೈರಲ್ ಆಗಿವೆ.
ಇದನ್ನೂ ಓದಿ: ಪತಿಯೊಂದಿಗೆ ಸಖತ್ ಸ್ಟೆಪ್ ಹಾಕಿದ ಸ್ಮೃತಿ ಮಂದಾನ : ವಿಡಿಯೋ ವೈರಲ್



















