ಬೆಂಗಳೂರು: ವಂದೇ ಭಾರತ್ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ದಾರುಣ ಘಟನೆಯೊಂದು ನಗರದ ಚಿಕ್ಕಬಾಣಾವರ ರೈಲು ನಿಲ್ದಾಣದಲ್ಲಿ ನಡೆದಿದೆ.
ಕೇರಳ ಮೂಲದ ಸ್ಟೆರ್ಲಿನ್ ಎಲಿಜ ಶಾಜಿ (19), ಹಾಗೂ ಜಸ್ಟಿನ್ ಜೋಸೆಫ್ (20) ಮೃತಪಟ್ಟ ವಿದ್ಯಾರ್ಥಿಗಳು. ಇಬ್ಬರು ಸಪ್ತಗಿರಿ ಕಾಲೇಜಿನಲ್ಲಿ ಮೊದಲನೆ ವರ್ಷದ ನರ್ಸಿಂಗ್ ಓದುತ್ತಿದ್ದರು ಎಂದು ತಿಳಿದು ಬಂದಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಸದ್ಯ ಈ ಘಟನಾ ಸಂಬಂಧ ಬೆಂಗಳೂರು ಗ್ರಾಮಾಂತರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಹೊಲದಲ್ಲಿ ಪತ್ತೆಯಾದ ಒಂದೇ ಕುಟುಂಬದ ನಾಲ್ವರ ಶವ



















