ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೇ ಉದ್ಯೋಗ ಪಡೆಯಬೇಕು. ಅದರಲ್ಲೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಬಯಸುತ್ತಿರುವವರಿಗೆ ಒಳ್ಳೆಯ ಅವಕಾಶ ದೊರೆತಿದೆ. ಭಾರತೀಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ (SIDBI Consultant Credit Analyst Recruitment 2025) ಅಧಿಸೂಚನೆ ಹೊರಡಿಸಲಾಗಿದೆ. ಕನ್ಸಲ್ಟಂಟ್ ಕ್ರೆಡಿಟ್ ಅನಾಲಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್
ಹುದ್ದೆಗಳ ಹೆಸರು: ಕನ್ಸಲ್ಟಂಟ್ ಕ್ರೆಡಿಟ್ ಅನಾಲಿಸ್ಟ್
ಒಟ್ಟು ಹುದ್ದೆಗಳು: ವಿವಿಧ
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಡಿಸೆಂಬರ್ 4
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಸಿಎ, ಸಿಎಂ ಎಂಬಿಎ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 28 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ವರ್ಷಕ್ಕೆ 15 ಲಕ್ಷ ರೂ.ನಿಂದ 20 ಲಕ್ಷ ರೂಪಾಯಿವರೆಗೆ ಸಂಬಳದ ಪ್ಯಾಕೇಜ್ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ https://www.sidbi.in/en/ ಗೆ ಭೇಟಿ ನೀಡಬೇಕು
- ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
- ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
- ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಬೇಕು
_ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು
ಇದನ್ನೂ ಓದಿ: ಬೆಂಗಳೂರಿನ NIMHANSನಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ



















