ಬೆಂಗಳೂರು: ಮುತ್ತೂಟ್ ಫೈನಾನ್ಸ್ ಸೇರಿ ಹಲವು ಸಂಸ್ಥೆಗಳನ್ನು ಹೊಂದಿರುವ ಮುತ್ತೂಟ್ ಗ್ರೂಪ್ ನಿಂದ 2025ನೇ ಸಾಲಿನಲ್ಲಿ ವಿದ್ಯಾರ್ಥಿವೇತನ ಘೋಷಣೆ ಮಾಡಲಾಗಿದೆ. ಮುತ್ತೂಟ್ ಎಂ ಜಾರ್ಜ್ ಫೌಂಡೇಷನ್ ವತಿಯಿಂದ ವಿದ್ಯಾರ್ಥಿವೇತನ (Muthoot M George Higher Education Scholarship 2025) ನೀಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ 2.4 ಲಕ್ಷ ರೂಪಾಯಿವರೆಗೆ ಸ್ಕಾಲರ್ ಶಿಪ್ ನೀಡಲಾಗುತ್ತದೆ. ಹೇಗೆ ಸಲ್ಲಿಸಬೇಕು ಎಂಬುದರ ಮಾಹಿತಿ ಇಲ್ಲಿದೆ.
ಯಾರೆಲ್ಲ ಅರ್ಹರು?
ಬಿ.ಟೆಕ್, ಎಂಬಿಬಿಎಸ್ ಹಾಗೂ ಬಿಎಸ್ಸಿ ನರ್ಸಿಂಗ್ ಕೋರ್ಸ್ ಅಧ್ಯಯನ ಮಾಡುತ್ತಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಗಳು ಪ್ರಸಕ್ತ ವರ್ಷದಲ್ಲಿಯೇ ಕೋರ್ಸ್ ಗಳಿಗೆ ಪ್ರವೇಶ ಪಡೆದಿರಬೇಕು. ಪಿಯುಸಿಯಲ್ಲಿ ಶೇ.90ರಷ್ಟು ಅಂಕಗಳನ್ನು ಪಡೆದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರ ಕುಟುಂಬದ ವಾರ್ಷಿಕ ಆದಾಯ 2 ಲಕ್ಷ ರೂಪಾಯಿ ದಾಟಿರಬಾರದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ, ದಿಲ್ಲಿ, ಪಶ್ಚಿಮ ಬಂಗಾಳ ಹಾಗೂ ತಮಿಳುನಾಡಿನ ವಿದ್ಯಾರ್ಥಿಗಳು ಮಾತ್ರ ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಎಂಬಿಬಿಎಸ್ ಓದುವವರಿಗೆ ಒಂದು ವರ್ಷಕ್ಕೆ 2.4 ಲಕ್ಷ ರೂಪಾಯಿ ಸ್ಕಾಲರ್ ಶಿಪ್ ನೀಡಲಾಗುತ್ತದೆ. ಬಿ.ಟೆಕ್ ಹಾಗೂ ಬಿಎಸ್ಸಿ ನರ್ಸಿಂಗ್ ಓದುವವರಿಗೆ 1.2 ಲಕ್ಷ ರೂಪಾಯಿ ನೀಡಲಾಗುತ್ತದೆ. ನವೆಂಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ https://www.buddy4study.com/scholarship/muthoot-m-george-higher-education-scholarship ವೆಬ್ ಸೈಟ್ ಗೆ ಭೇಟಿ ನೀಡಬೇಕು
ವಿದ್ಯಾರ್ಥಿಗಳು ರಿಜಿಸ್ಟರ್ ಮಾಡಿಕೊಳ್ಳಬೇಕು
ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
ಬಳಿಕ ಅರ್ಜಿಯನ್ನು ಸಲ್ಲಿಸಬೇಕು
ಮಾಹಿತಿಗೆ ಸಂಪರ್ಕಿಸಿ
Email ID: csr@muthootgroup.com | Phone Number: 0484-4804385
ಇದನ್ನೂ ಓದಿ: ಪಿಎಫ್ ಸಂಬಳದ ಮಿತಿ 25 ಸಾವಿರಕ್ಕೆ ಏರಿಕೆ : ಕೋಟ್ಯಂತರ ಉದ್ಯೋಗಿಗಳಿಗೆ ಗುಡ್ ನ್ಯೂಸ್


















