ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಎನರ್ಜಿ ಎಫಿಶಿಯನ್ಸಿ ಸರ್ವಿಸಸ್ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ (EESL Recruitment 2025) 10 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ದೇಶಾದ್ಯಂತ ಸೆಕ್ಟರ್ ಎಕ್ಸ್ ಪರ್ಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಎನರ್ಜಿ ಎಫಿಶಿಯನ್ಸಿ ಸರ್ವಿಸಸ್ ಲಿಮಿಟೆಡ್
ಒಟ್ಟು ಹುದ್ದೆಗಳು: 10
ಹುದ್ದೆಗಳ ಹೆಸರು: ಸೆಕ್ಟರ್ ಎಕ್ಸ್ ಪರ್ಟ್
ಉದ್ಯೋಗ ಸ್ಥಳ: ದೇಶಾದ್ಯಂತ
ವಿದ್ಯಾರ್ಹತೆ ಏನು?
ಪ್ರೋಗ್ರಾಂ ಮ್ಯಾನೇಜರ್, ಸೆಕ್ಟರ್ ಎಕ್ಸ್ ಪರ್ಟ್, ಪ್ರೊಕ್ಯೂರ್ ಮೆಂಟ್ ಆಫೀಸರ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿಇ, ಬಿಟೆಕ್, ಎಂಬಿಎ ಕೋರ್ಸ್ ಗಳನ್ನು ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ.
ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 60 ಸಾವಿರ ರೂಪಾಯಿಯಿಂದ 1.5 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ eeslindia.org ವೆಬ್ ಸೈಟ್ ಗೆ ಭೇಟಿ ನೀಡಬೇಕು. ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಹೊಂಡಾ ಸಿಬಿ750 ಹಾರ್ನೆಟ್ 2026 | ಇ-ಕ್ಲಚ್ ತಂತ್ರಜ್ಞಾನದೊಂದಿಗೆ ಮಾರುಕಟ್ಟೆಗೆ ಲಗ್ಗೆ ; ಭಾರತಕ್ಕೆ ಯಾವಾಗ?



















