ಶಿವಮೊಗ್ಗ : ನವವಿವಾಹಿತೆಯೊಬ್ಬಳು ಪತಿ ಹಾಗೂ ಆತನ ಮನೆಯವರ ಕಿರುಕುಳದಿಂದ ಬೇಸತ್ತು ಮದುವೆ ಆದ 6 ತಿಂಗಳಿಗೆ ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ ಭದ್ರಾವತಿ ತಾಲೂಕಿನ ಹಂಚಿನ ಸಿದ್ದಾಪುರ ಗ್ರಾಮದ ಬಳಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ನವವಿವಾಹಿತೆಯನ್ನು ಲತಾ (25) ಎಂದು ಗುರುತಿಸಲಾಗಿದೆ.
ಭದ್ರಾವತಿಯ ಹಂಚಿನ ಸಿದ್ದಾಪುರದ ನಿವಾಸಿಯಾಗಿರುವ ಲತಾ ಬಿಎಸ್‌ಸಿ ಮತ್ತು ಬಿಎಡ್ ಪದವೀಧರೆ ಆಗಿದ್ದರು. 2025ರ ಏಪ್ರಿಲ್ 14ರಂದು ಶಿಕಾರಿಪುರದ ಗುರುರಾಜ್ ಜೊತೆಗೆ ಲತಾ ವಿವಾಹವಾಗಿತ್ತು. ಆರು ತಿಂಗಳ ಹಿಂದೆಯಷ್ಟೇ ಲತಾ ಗುರುರಾಜ್‌ನನ್ನು ಮದುವೆಯಾಗಿದ್ದರು. ಪತಿ ಗುರುರಾಜ್ ಬಿಆರ್‌ಪಿಯ ಕೆಪಿಸಿಎಲ್‌ನಲ್ಲಿ ಎಇಇ ಆಗಿದ್ದಾರೆ. ವಾಟ್ಸಪ್‌ನಲ್ಲಿ ಡೆತ್ ನೋಟ್ ಬರೆದಿಟ್ಟಿರುವ ಲತಾ, ಭದ್ರಾ ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ವಾಟ್ಸ್ಯಾಪ್‌ನಲ್ಲಿ ಡೆತ್ ನೋಟ್ ಬರೆದಿರುವ ಲತಾ ಪತಿ ಹಾಗೂ ಮನೆಯವರ ಕಿರುಕುಳದ ಬಗ್ಗೆ ದೂರು ನೀಡಿದ್ದಾರೆ. ನವೆಂಬರ್ 23ರಂದು ಲತಾ ನಾಲೆಗೆ ಹಾರಿದ್ದಾರೆ. ಸದ್ಯ ಲತಾ ಶವಕ್ಕಾಗಿ ಇದೀಗ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ. ಘಟನೆ ಕುರಿತಂತೆ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಬಳಿಕ ಲತಾ ಅವರ ಪತಿ ಹಾಗೂ ಆತನ ಕುಟುಂಬಸ್ಥರು ನಾಪತ್ತೆಯಾಗಿದ್ದಾರೆ.
ಇದನ್ನೂ ಓದಿ : ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕುನಾಲ್ ಕಾಮ್ರಾ : ಆರ್‌ಎಸ್‌ಎಸ್ ಅಣಕಿಸಿದ ಟಿ-ಶರ್ಟ್‌ಗೆ ಬಿಜೆಪಿ ಗರಂ



















