ಬೆಂಗಳೂರು: ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ರೈಲ್ವೆ ಕೆಟರಿಂಗ್ ಹಾಗೂ ಪ್ರವಾಸೋದ್ಯಮ ನಿಗಮದಲ್ಲಿ (IRCTC Recruitment 2025) ಖಾಲಿ ಇರುವ 50 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಹಾಸ್ಪಿಟಾಲಿಟಿ ಮಾನಿಟರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ರೈಲ್ವೆ ಕೆಟರಿಂಗ್ ಹಾಗೂ ಪ್ರವಾಸೋದ್ಯಮ ನಿಗಮ (IRCTC)
ಹುದ್ದೆಗಳ ಹೆಸರು: ಹಾಸ್ಪಿಟಾಲಿಟಿ ಮಾನಿಟರ್
ಒಟ್ಟು ಹುದ್ದೆಗಳು: 50
ನೇಮಕಾತಿ ವಿಧಾನ: ನೇರ ಸಂದರ್ಶನ
ಉದ್ಯೋಗ ಸ್ಥಳ: ದೇಶದ ಹಲವೆಡೆ
ದೇಶದ ಹಲವೆಡೆ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿಎಸ್ಸಿ, ಬಿಬಿಎ, ಎಂಬಿಎ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಶಾರ್ಟ್ ಲಿಸ್ಟಿಂಗ್ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲಿಗೆ irctc.com ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಲ್ಲಿ ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಓದಬೇಕು. ಅಧಿಸೂಚನೆಯಲ್ಲಿ ತಿಳಿಸಿದ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕು. ನೇಮಕಾತಿ ಹೊಂದಿದವರಿಗೆ ಮಾಸಿಕ 30 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ.
ಸಂದರ್ಶನ ನಡೆಯುವ ಸ್ಥಳ
IRCTC Zonal Office 3 Koilaghat Street, Ground Floor Kolkata-700 001
ನೇರ ಸಂದರ್ಶನದ ದಿನಾಂಕ: ಡಿಸೆಂಬರ್ 10
ಇದನ್ನೂ ಓದಿ : ಕಡಬ | ಕೌಟುಂಬಿಕ ಕಲಹದಿಂದ ಮನನೊಂದು ಆತ್ಮಹತ್ಯೆ ಯತ್ನಿಸಿದ ಪತಿ ; ಚಿಕಿತ್ಸೆ ಫಲಕಾರಿಯಾಗದೇ ನಿಧನ



















