ಕಾರವಾರ : ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಶಿಕ್ಷಕ ಸೇರಿದಂತೆ ಐವರು ವಿದ್ಯಾರ್ಥಿಗಳನ್ನು ಲೈಫ್ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯಿಂದ ಪ್ರೌಢಶಾಲೆ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಶಿಕ್ಷಕ ಸೇರಿದಂತೆ ಐವರು ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಲಾಗಿದೆ.
ಲೈಫ್ಗಾರ್ಡ್ ಸಿಬ್ಬಂದಿ ದರ್ಶನ್ ಹರಿಕಾಂತ್, ಚಿದಾನಂದ ಲಕ್ಕುಮನೆ, ದೀಪಕ್ ಗೌಡ, ಅಶೋಕ್ ಹರಿಕಾಂತ್, ಮಹೇಶ್ ಮತ್ತು ಜಗ್ಗುರಿಂದ ರಕ್ಷಣೆ ಮಾಡಲಾಗಿದೆ.
ಇದನ್ನೂ ಓದಿ : ದಿತ್ವಾ ಚಂಡಮಾರುತದ ಅಬ್ಬರ : ಚೆನ್ನೈನಲ್ಲಿ 54 ವಿಮಾನಗಳು ರದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!



















