ಬೆಂಗಳೂರು: ನಟಿ ಆಶಿಕಾ ರಂಗನಾಥ್ ಅವರ ಸಂಬಂಧಿ ಯುವತಿ ಡ್ರಗ್ ಅಡಿಕ್ಟ್ ಯುವಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಪಾಂಡುರಂಗ ನಗರದಲ್ಲಿ ನಡೆದಿದೆ.
ಹಾಸನ ಮೂಲದ ಅಚಲ (22) ನ. 22ರಂದು ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ಎಂಜಿನಿಯರಿಂಗ್ ಮುಗಿಸಿ ಕೆಲಸಕ್ಕೆ ಸೇರುವ ತಯಾರಿಯಲ್ಲಿದ್ದ ಅಚಲ ತನ್ನ ದೂರದ ಸಂಬಂಧಿ ಮಯಾಂಕ್ ಜೊತೆ ಸ್ನೇಹ ಹೊಂದಿದ್ದರು. ಇದೇ ವೇಳೆ ಪ್ರೀತಿಸುವುದಾಗಿ ನಂಬಿಸಿ ಸುತ್ತಾಡುತ್ತಿದ್ದ ಮಯಾಂಕ್ ಮದುವೆಗೆ ಮೊದಲೇ ದೈಹಿಕ ಸಂಬಂಧಕ್ಕೆ ಒತ್ತಾಯಿಸಿದ್ದ. ಡ್ರಗ್ ಅಡಿಕ್ಟ್ ಆಗಿದ್ದ ಮಯಾಂಕ್ ಪದೇ ಪದೇ ಸಂಪರ್ಕಕ್ಕೆ ಪೀಡಿಸುತ್ತಿದ್ದ. ಇದಕ್ಕೆ ಅಚಲ ಒಪ್ಪದಿದ್ದಕ್ಕೆ ದೈಹಿಕ ಹಲ್ಲೆ ನಡೆಸಿ ಮಾನಸಿಕವಾಗಿಯೂ ಕಿರುಕುಳ ಕೊಡುತ್ತಿದ್ದ. ಪದೇ ಪದೇ ಫೋನ್ ಮಾಡಿ ಕಿರುಕುಳ ನೀಡುತ್ತಿದ್ದ ಇದರಿಂದ ಬೇಸತ್ತು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಅಚಲ ತಾಯಿ ಕಣ್ಣೀರಿಟ್ಟಿದ್ದಾರೆ.
ಈ ಘಟನೆ ನಡೆದು 10 ದಿನ ಕಳೆದರೂ, ಸಾಕ್ಷ್ಯಗಳಿದ್ದರೂ ಆರೋಪಿ ಬಂಧನ ಆಗದೇ ಇರುವುದು ಅಚಲ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಸದ್ಯ ಮಯಾಂಕ್ ಹಾಗೂ ಆತನ ತಾಯಿ ಮೈನಾ ವಿರುದ್ಧ ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗಳ ಸಾವಿಗೆ ಕಾರಣವಾದರನ್ನು ಕೂಡಲೆ ಬಂಧಿಸಿ ಎಂದು ಅಚಲ ಪೋಷಕರು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ‘ಕಾಂತಾರ’ದ ದೈವವನ್ನು ‘ದೆವ್ವ’ ಎಂದು ಕರೆದು ಅಣಕಿಸಿದ ರಣವೀರ್ ಸಿಂಗ್ ; ನೆಟ್ಟಿಗರಿಂದ ವ್ಯಾಪಕ ಆಕ್ರೋಶ!



















