ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸುಳೆ ಮುರ್ಕಿ ಬಳಿ ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಪಲ್ಟಿಯಾಗಿದೆ. ಅಪಘಾತದಲ್ಲಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 26ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮೃತ ಬಾಲಕನನ್ನು ಮೈಸೂರಿನ ಪವನ್ (15) ಎಂದು ಗುರುತಿಸಲಾಗಿದೆ. ಈತ SSLC ವಿದ್ಯಾರ್ಥಿಯಾಗಿದ್ದ ಎಂದು ತಿಳಿದುಬಂದಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ ತಿಳಿದುಬಂದಿದೆ.
ಮೈಸೂರಿನ ತರಳಬಾಳು ವಿದ್ಯಾ ಸಂಸ್ಥೆಯ ಶಾಲಾ ಮಕ್ಕಳು ಗೋಕರ್ಣಕ್ಕೆ ಪ್ರವಾಸಕ್ಕೆ ಹೊರಟಿದ್ದರು. ಬಸ್ ಸುಳೆ ಮುರ್ಕಿ ಕ್ರಾಸ್ ಬಳಿ ಬಸ್ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಈ ಸಂಬಂಧ ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ತಮಿಳುನಾಡಿನಲ್ಲಿ ಎರಡು ಸರ್ಕಾರಿ ಬಸ್‌ಗಳ ನಡುವೆ ಭೀಕರ ಅಪಘಾತ | 11 ಸಾವು, ಹಲವರಿಗೆ ಗಂಭೀರ ಗಾಯ



















