ಉಡುಪಿ: ನಿರ್ಜನ ಪ್ರದೇಶದಲ್ಲಿ ಯುವತಿಯನ್ನು ಅಡ್ಡಗಟ್ಟಿ ಅತ್ಯಾಚಾರ ಮಾಡಿ, ಕೊಲೆ ಯತ್ನ ಮಾಡಿರುವ ಆರೋಪದಡಿ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತನನ್ನು ಬಂಧಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿ ತಾಲೂಕಿನ ಪೆರ್ಡೂರು ಹಿಂದು ಜಾಗರಣಾ ವೇದಿಕೆಯ ನಾಯರ್‌ಕೋಡು ಘಟಕದ ಪ್ರದೀಪ್ ಪೂಜಾರಿ(26) ಬಂಧಿತ ಆರೋಪಿ. ಸಂತ್ರಸ್ತೆಗೆ ನಿರಂತರವಾಗಿ ಮದುವೆಯಾಗುವಂತೆ ಕಿರುಕುಳ ನೀಡುತ್ತಿದ್ದ. ಹಿನ್ನಲೆ ಯುವತಿಯು ಪ್ರದೀಪ್ ಪೂಜಾರಿ ಜೊತೆಗೆ ಮದುವೆಗೆ ನಿರಾಕರಿಸಿ, ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ಈ ಪ್ರಕರಣ ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.
ಕೆಲ ದಿನಗಳ ಬಳಿಕ ಜಾಮೀನು ಪಡೆದು ಬಿಡುಗಡೆಯಾಗಿ ಬಂದಿದ್ದ ಆರೋಪಿ. ನ.29ರಂದು ನಿರ್ಜನ ಪ್ರದೇಶದಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಮತ್ತೆ ಮದುವೆಯಾಗುವಂತೆ ಪೀಡಿಸಿದ್ದಾನೆ. ಯುವತಿ ನಿರಾಕರಿಸಿದಾಗ ಆಕೆಯನ್ನು ಅಲ್ಲೇ ಕತ್ತು ಹಿಸುಕಿ ಬೆದರಿಸಿ, ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಯುವತಿಯ ಪೋಷಕರು ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಸದ್ಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಇದನ್ನೂ ಓದಿ: ಗಾಜು ತುಂಬಿದ ಲಾರಿಗೆ ಬೈಕ್ ಡಿಕ್ಕಿ | ಇಬ್ಬರು ಗಂಭೀರ!



















