ಬೆಳಗಾವಿ: ಖಾಸಗಿ ಕಾಲೇಜಿನ ಅತಿಥಿ ಉಪನ್ಯಾಸಕರೊಬ್ಬರು ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಮೇಲೆ ಅತ್ಯಚಾರ ಎಸಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ನಾಗೇಶ್ವರ ದೇಮಿನಕೊಪ್ಪ ಅತ್ಯಾಚಾರ ಎಸಗಿರುವ ಆರೋಪಿ. ಈ ಸಂಬಂಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ಕ್ಯಾಂಪ್ ಠಾಣೆ ಪೊಲೀಸರು, ಶನಿವಾರ ಆರೋಪಿಯನ್ನು ಬಂಧನ ಮಾಡಿದ್ದಾರೆ.
ಆರೋಪಿ ಕಳೆದ ಎರಡು ವರ್ಷಗಳಿಂದ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ವಿಷಯ ಬಹಿರಂಗಪಡಿಸದಂತೆ ತನಗೆ ಜೀವ ಬೆದರಿಕೆ ಕೂಡ ಹಾಕಿದ್ದ ಎಂದು ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಆರೋಪಿ ಉಪನ್ಯಾಸಕನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮುಂದಿನ ತನಿಖೆ ಕೈಗೊಂಡಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: “ನನ್ನ ಪತ್ನಿ ಅರ್ಧ ಭಾರತೀಯಳೆಂದು ನಿಮಗೆ ಗೊತ್ತೇ?” : ಭಾರತದೊಂದಿಗಿನ ಆಪ್ತ ನಂಟು ಬಿಚ್ಚಿಟ್ಟ ಎಲಾನ್ ಮಸ್ಕ್



















