ಬೆಂಗಳೂರು: ನೀವು ರಾಜ್ಯ ಸರ್ಕಾರದ ಒಡೆತನದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಕೊಪ್ಪಳದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ (DHFWS Koppal Recruitment 2025) ಖಾಲಿ ಇರುವ 3 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ನೇತ್ರ ಸಹಾಯಕ (Ophthalmic Assistant) ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಪ್ಪಳ
ಹುದ್ದೆ ಹೆಸರು: ನೇತ್ರ ಸಹಾಯಕ (Ophthalmic Assistant)
ಒಟ್ಟು ಹುದ್ದೆ: 03
ಉದ್ಯೋಗ ಸ್ಥಳ: ಕೊಪ್ಪಳ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 10
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಡಿಪ್ಲೋಮಾ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 18ರಿಂದ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ದಾಖಲೆ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕ ಇರುವುದಿಲ್ಲ. ನೇಮಕಾತಿ ಹೊಂದಿದವರಿಗೆ ಮಾಸಿಕ 15,114 ಸಾವಿರ ರೂ. ಸಂಬಳ ನೀಡಲಾಗುತ್ತದೆ ಎಂದು ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ koppal.nic.in ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು, ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು.
ಇದನ್ನೂ ಓದಿ; SBI ಗ್ರಾಹಕರೇ ಗಮನಿಸಿ : ಆನ್ ಲೈನ್ ಹಣ ವರ್ಗಾವಣೆ ಸೇವೆ ಸ್ಥಗಿತಗೊಳಿಸಿದ ಬ್ಯಾಂಕ್



















