ಬೆಂಗಳೂರು: ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ರಾಯಚೂರು ಜಿಲ್ಲೆಯಲ್ಲಿರುವ ಹಟ್ಟಿ ಚಿನ್ನದ ಗಣಿ ಕಂಪನಿ ಲಿಮಿಟೆಡ್ ನಲ್ಲಿ (HGML Recruitment 2025) ಖಾಲಿ ಇರುವ ಸೆಕ್ಯುರಿಟಿ ಆಫೀಸರ್ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಇದರೊಂದಿಗೆ ಕರ್ನಾಟಕ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಒಳ್ಳೆಯ ಅವಕಾಶವಾಗಿದೆ. ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿಗೆ ಸಂಬಂಧಿಸಿದ ವಿವರ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಹಟ್ಟಿ ಚಿನ್ನದ ಗಣಿ ಕಂಪನಿ ಲಿಮಿಟೆಡ್ (HGML)
ಹುದ್ದೆಗಳು: 01
ಹುದ್ದೆ ಹೆಸರು: ಸೆಕ್ಯುರಿಟಿ ಆಫೀಸರ್
ಉದ್ಯೋಗ ಸ್ಥಳ: ಹಟ್ಟಿ ಚಿನ್ನದ ಗಣಿ, ರಾಯಚೂರು
ಸಂದರ್ಶನದ ದಿನಾಂಕ: ಡಿಸೆಂಬರ್ 6
ಗರಿಷ್ಠ 45 ವರ್ಷದೊಳಗಿನ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 70 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅಭ್ಯರ್ಥಿಗಳು ಮೊದಲು huttigold.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಳ್ಳಬೇಕು. ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು ಎಂದು ತಿಳಿಸಲಾಗಿದೆ.
ರಾಯಚೂರು ಹಾಗೂ ಅಕ್ಕಪಕ್ಕದ ಜಿಲ್ಲೆಯವರು ಸಮೀಪದಲ್ಲಿಯೇ ಉದ್ಯೋಗ ಕಂಡುಕೊಳ್ಳಬೇಕು ಎನ್ನುವವರಿಗೆ ಇದು ಒಳ್ಳೆಯ ಅವಕಾಶವಾಗಿದೆ. ಲಿಖಿತ ಪರೀಕ್ಷೆಯೂ ಇಲ್ಲದಿರುವ ಕಾರಣ, ಸಂದರ್ಶನದ ಆಧಾರದ ಮೇಲೆ ನೇಮಕಾತಿ ನಡೆಯುತ್ತದೆ. ಇದು ಗುತ್ತಿಗೆ ಆಧಾರಿತ ನೇಮಕಾತಿಯಾಗಿದೆ.
ಸಂದರ್ಶನ ನಡೆಯುವ ಸ್ಥಳ
Administrative Office of Hutti Gold Mines Company Limited, Hatti-584115
ಸಂದರ್ಶನದ ಸಮಯ: ಬೆಳಗ್ಗೆ 9 ಗಂಟೆಯಿಂದ ಸಂಜೆ 5
ಇದನ್ನೂ ಓದಿ: ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ 11 ಹುದ್ದೆಗಳ ನೇಮಕ : ಕರ್ನಾಟಕದಲ್ಲೇ ಉದ್ಯೋಗ



















