ಬೆಂಗಳೂರು : ಬೈಕ್ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವೃದ್ಧ ಸಾವನ್ನಪ್ಪಿದ ಘಟನೆ ನಾಗರಬಾವಿಯ ಮುಖ್ಯರಸ್ತೆಯಲ್ಲಿ ನಡೆದಿದೆ. ಮಂಗಳವಾರ ಬೆಳಗ್ಗೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಅಪಘಾತದಲ್ಲಿ ಮಂಗನಹಳ್ಳಿಯ ಮಧು (74) ಮೃತಪಟ್ಟಿದ್ದಾರೆ. ಕೆಟಿಎಂ ಬೈಕ್ ಸವಾರ ಶ್ರೀನಿವಾಸಗ ಎಂಬಾತ ಅಪಘಾತವೆಸಗಿದ್ದಾನೆ. ಅಪಘಾತದ ಪರಿಣಾಮ ಮಧು ತಲೆಗೆ ತೀವ್ರ ಪೆಟ್ಟಾಗಿತ್ತು. ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸದ್ಯ ಆರೋಪಿ ಶ್ರೀನಿವಾಸ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಇದನ್ನೂ ಓದಿ : ಬೆಳಗಾವಿ ಅಧಿವೇಶನ | ಸುವರ್ಣ ಸೌಧ ಆವರಣದಲ್ಲಿ ನಿಷೇಧಾಜ್ಞೆ.. ಪೊಲೀಸರು ಹೈ ಅಲರ್ಟ್!



















