ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತ್ ಡೈನಾಮಿಕ್ಸ್ ಲಿಮಿಟೆಡ್ ನಲ್ಲಿ (BDL Recruitment 2025) ಖಾಲಿ ಇರುವ 80 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 80 ಮ್ಯಾನೇಜ್ ಮೆಂಟ್ ಟ್ರೈನಿ ಹುದ್ದೆಗಳಾಗಿದ್ದು, ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಒಳ್ಳೆಯ ಅವಕಾಶವಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತ್ ಡೈನಾಮಿಕ್ಸ್ ಲಿಮಿಟೆಡ್
ಒಟ್ಟು ಹುದ್ದೆಗಳು: 80
ಹುದ್ದೆಗಳ ಹೆಸರು: ಮ್ಯಾನೇಜ್ ಮೆಂಟ್ ಟ್ರೈನಿ
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಡಿಸೆಂಬರ್ 29
ಉದ್ಯೋಗ ಸ್ಥಳ: ದೇಶಾದ್ಯಂತ
ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ಸಿಎ, ಎಂಬಿಎ, ಪದವಿ, ಬಿ.ಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದು. ಎಲೆಕ್ಟ್ರಾನಿಕ್, ಮೆಕ್ಯಾನಿಕಲ್, ಕೆಮಿಕಲ್ ಹಾಗೂ ಸಿವಿಲ್ ವಿಭಾಗಗಳಲ್ಲಿ ಕೆಲಸ ಮಾಡಲು ಬಯಸುವವರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಹೊಂದಿದವರಿಗೆ ಮಾಸಿಕ 40 ಸಾವಿರ ರೂಪಾಯಿಯಿಂದ 1.4 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ಸೈಟ್ bdl-india.in ಗೆ ಭೇಟಿ ನೀಡಬೇಕು
ಮ್ಯಾನೇಜ್ ಮೆಂಟ್ ಟ್ರೈನಿ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಆನ್ ಲೈನ್ ಮೂಲಕವೇ ಶುಲ್ಕ ಪಾವತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ : ಸಂಚಾರ್ ಸಾಥಿ ಆ್ಯಪ್ ಅಳವಡಿಕೆ ಕಡ್ಡಾಯವಲ್ಲ | ಆದೇಶ ಹಿಂಪಡೆದ ಕೇಂದ್ರ ಸರ್ಕಾರ



















