ನವದೆಹಲಿ : ದಕ್ಷಿಣ ಆಫ್ರಿಕಾ ವಿರುದ್ಧ ಮುಂಬರುವ 5 ಪಂದ್ಯಗಳ ಟಿ20 ಸರಣಿಗೆ 15 ಸದಸ್ಯರ ಬಲಿಷ್ಠ ಭಾರತ ತಂಡವನ್ನು ಬಿಸಿಸಿಐ ಬುಧವಾರ ಪ್ರಕಟಿಸಿದೆ.
ಗಾಯದಿಂದ ಗುಣಮುಖರಾಗಿರುವ ಉಪ ನಾಯಕ ಶುಭಮನ್ ಗಿಲ್ ಅವರು ಕೂಡ ಈ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ ಅವರು ಈ ಸರಣಿಗೂ ಮುನ್ನ ಫಿಟ್ನೆಸ್ ಟೆಸ್ಟ್ ಪಾಸ್ ಮಾಡಬೇಕಾದ ಅಗತ್ಯವಿದೆ.
ಬಿಸಿಸಿಐ ತನ್ನ ಅಧಿಕೃತ ಹೇಳಿಕೆಯಲ್ಲಿ ಈ ವಿಷಯವನ್ನು ಉಲ್ಲೇಖಿಸಿದೆ. ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಣ ಟಿ20 ಸರಣಿಯು ಡಿಸೆಂಬರ್ 9 ರಂದು ಆರಂಭವಾಗಲಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಟಿ20ಐ ಸರಣಿಗೆ ಭಾರತ ತಂಡ :
ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್‌ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್
ಇದನ್ನೂ ಓದಿ : ವಿರಾಟ್ ಕೊಹ್ಲಿ ಮತ್ತೊಂದು ಭರ್ಜರಿ ಶತಕ.. ರಾಂಚಿ ಬಳಿಕ ರಾಯ್ಪುರದಲ್ಲೂ ಅಬ್ಬರಿಸಿದ ಕ್ರಿಕೆಟ್ ದೊರೆ!



















