ಚಿತ್ರದುರ್ಗ: ಚಲಿಸುತ್ತಿದ್ದ ಬೈಕಿಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರಿನಲ್ಲಿ ಕೊಂಡ್ಲಹಳ್ಳಿಯ ಇಸ್ಲಾಂಪುರ ಸಮೀಪದಲ್ಲಿ ನಡೆದಿದೆ.
ತುಮಕೂರ್ಲಹಳ್ಳಿ ಶಿವಶಂಕರ (31) ಮೃತವ್ಯಕ್ತಿ. ಕೊಂಡ್ಲಹಳ್ಳಿ ಕಡೆ ಹೋಗುತ್ತಿದ್ದ ಬೈಕ್‌ಗೆ ಇಸ್ಲಾಂಪುರ ಕಡೆಯಿಂದ ನೆರ್ಲಹಳ್ಳಿ ಕಡೆಗೆ ಹೋಗುತ್ತಿದ್ದ ಟ್ರ್ಯಾಕ್ಟರ್ ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲಿದ್ದ ಸವಾರ ಗಂಭೀರವಾಗಿ ಗಾಯಗೊಂಡಿದ್ದ. ಬಳಿಕ ಈತನನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ನಂತರ ವೈದ್ಯರ ಸಲಹೆ ಮೇರೆಗೆ ಬಳ್ಳಾರಿ ಟಿಸಿಸಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ವೈದ್ಯರು ಪರೀಕ್ಷಿಸಿ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ಮೂರೇ ತಿಂಗಳಲ್ಲಿ ಆತ್ಮಹತ್ಯೆ..!



















