ಬೆಂಗಳೂರು: ಮೆಟ್ರೋ ರೈಲು ಬರುತ್ತಿದ್ದಂತೆ ಟ್ರ‍್ಯಾಕ್‌ಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನೇರಳೆ ಮಾರ್ಗದ ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.
ಘಟನೆ ಬಳಿಕ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರಕ್ಕೆ ತಾತ್ಕಾಲಿಕ ಅಡಚಣೆ ಉಂಟಾಗಿದೆ. ಮೈಸೂರು ರಸ್ತೆ–ಚಲ್ಲಘಟ್ಟ ನಡುವೆ ರೈಲು ಸಂಚಾರವನ್ನು ತಕ್ಷಣವೇ ಸ್ಥಗಿತಗೊಳಿಸಲಾಗಿದೆ. ಪ್ರಸ್ತುತ ಮೆಟ್ರೋ ರೈಲುಗಳು ವೈಟ್ಫೀಲ್ಡ್ನಿಂದ ಮೈಸೂರು ರಸ್ತೆ ಮೆಟ್ರೋ ನಿಲ್ದಾಣದವರೆಗೆ ಮಾತ್ರ ಸಂಚರಿಸುತ್ತಿವೆ.
ಘಟನೆ ಸ್ಥಳಕ್ಕೆ ಮೆಟ್ರೋ ಸುರಕ್ಷತಾ ಸಿಬ್ಬಂದಿ ಹಾಗೂ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಮೃತನನ್ನು ವಿಜಯಪುರ ಜಿಲ್ಲೆ ದೇವರಹಿಪ್ಪರಗಿಯ ಶಾಂತಗೌಡ (25) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಕೆಂಗೇರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶಾಂತನಗೌಡ ಮೃತದೇಹವನ್ನು ರಾಜರಾಜೇಶ್ವರಿನಗರ ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿ : ಸಿಲಿಕಾನ್ ಸಿಟಿಯಲ್ಲಿ ತುಂತುರು ಮಳೆ | ಚಳಿಯಲ್ಲೂ ತಂಪೆರೆದ ಮಳೆರಾಯ!


















