ಚಿಕ್ಕಮಗಳೂರು: ದತ್ತ ಜಯಂತಿ ಬ್ಯಾನರ್ ತೆರವು ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ 2 ಬಣದ ನಡುವೆ ಶುರುವಾದ ಮಾರಾಮಾರಿಯಿಂದ ಕಾಂಗ್ರೆಸ್ ಗ್ರಾಮ ಪಂಚಾಯತ್ ಸದಸ್ಯ ಮೃತಪಟ್ಟ ಘಟನೆ ಕಡೂರು ತಾಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ಚರ ಮಠದ ಬಳಿ ನಡೆದಿದೆ.
ಘರ್ಷಣೆ ವೇಳೆ ಗಣೇಶ್ ಎಂಬಾತನನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಭಜರಂಗದಳ ಕಾರ್ಯಕರ್ತರಾದ ಸಂಜಯ್, ಮಿಥುನ್ ಎಂಬುವವರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಮೇಲೆ ಮಚ್ಚಿನಿಂದ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ದಾಳಿ ನಡೆಸಿದ ಸ್ಥಳದಲ್ಲಿಯೇ ಗಣೇಶ್ ಸಾವನ್ನಪ್ಪಿದ್ದಾನೆ. ಆರೋಪಿ ಸಂಜಯ್ ತಲೆಗೂ ಗಂಭೀರ ಗಾಯವಾಗಿದ್ದು, ಈತನನ್ನು ಚಿಕ್ಕಮಗಳೂರು ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ ಮತ್ತೋರ್ವ ಆರೋಪಿ ಮಿಥುನ್ ಸದ್ಯ ತಲೆ ಮರೆಸಿಕೊಂಡಿದ್ದಾನೆ. ಗಣೇಶ್ ತಲೆ ಭಾಗಕ್ಕೆ ಮಚ್ಚಿನಿಂದ ದಾಳಿ ನಡೆಸಿದ ಪರಿಣಾಮ ಆತ ಸಾವನ್ನಪ್ಪಿದ್ದು, ಆತನ ಮೃತದೇಹವನ್ನ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಸದ್ಯ ಚಿಕ್ಕಮಗಳೂರು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆ ಬಳಿ ಎಸ್‌ಪಿ ವಿಕ್ರಮ್ ಆಮ್ಟೆ ಪ್ರತಿಕ್ರಿಯಿಸಿ, ಆರೋಪಿಗಳ ಪತ್ತೆಗಾಗಿ ನಾಲ್ಕು ವಿಶೇಷ ತಂಡ ರಚನೆ ಮಾಡಲಾಗಿದೆ. ಯಾವ ಕಾರಣಕ್ಕೆ ಕೊಲೆ ನಡೆದಿದೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಗಲಾಟೆಯಲ್ಲಿ ಭಾಗಿಯಾದ ಇಬ್ಬರು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು ಸಖರಾಯಪಟ್ಟಣ ವ್ಯಾಪ್ತಿಯಲ್ಲಿ ಸೂಕ್ತ ಪೊಲೀಸ್ ಬಂದೋ ಬಸ್ತ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಧಾರವಾಡದ ಅಣ್ಣಿಗೇರಿ ಬಳಿ ಕಾರಲ್ಲೇ ಸುಟ್ಟು ಕರಕಲಾದ ಇನ್ಸ್ಪೆಕ್ಟರ್..!



















