ಬೆಂಗಳೂರು: ಸರ್ಕಾರಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ನೌಕರರ ರಾಜ್ಯ ವಿಮಾ ನಿಗಮದಲ್ಲಿ (ESIC Karnataka Recruitment 2025) ಖಾಲಿ ಇರುವ 24 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಸೀನಿಯರ್ ರೆಸಿಡೆಂಟ್ ಹಾಗೂ ಸ್ಪೆಷಲಿಸ್ಟ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಹುದ್ದೆಗಳ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ನೌಕರರ ರಾಜ್ಯ ವಿಮಾ ನಿಗಮ (ESIC)
ಹುದ್ದೆ ಹೆಸರು: ಸೀನಿಯರ್ ರೆಸಿಡೆಂಟ್ ಹಾಗೂ ಸ್ಪೆಷಲಿಸ್ಟ್
ಒಟ್ಟು ಹುದ್ದೆಗಳು: 41
ಉದ್ಯೋಗ ಸ್ಥಳ: ಬೆಂಗಳೂರು
ಸಂದರ್ಶನದ ದಿನಾಂಕ: ಡಿಸೆಂಬರ್ 16
ಕನಿಷ್ಠ 67 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ 1.27 ಲಕ್ಷ ರೂ.ವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಸಂದರ್ಶನಕ್ಕೆ ಹಾಜರಾಗುವವರು ಎಂಡಿ, ಡಿಎಂಎಸ್, ಎಂಬಿಬಿಎಸ್ ಹಾಗೂ ಸ್ನಾತಕೋತ್ತರ ಪದವಿ ಪಡೆದಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅಭ್ಯರ್ಥಿಗಳು ಮೊದಲು https://esic.gov.in/ ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆ ಓದಿದ ಬಳಿಕ ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು. ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು. ಇದಾದ ಬಳಿಕ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.
ಸಂದರ್ಶನ ಸ್ಥಳ
Office of the Medical Superintendent, ESIC Hospital, Peenya, 55-1-11, Plot No.1, 5th Main Road (FTI Campus), Survey No. 11, Yeshwanthapur, Bengaluru-22
ಇದನ್ನೂ ಓದಿ: ಆರ್ಯಭಟ ಸಂಶೋಧನಾ ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕ : ಬೆಂಗಳೂರಿನಲ್ಲೇ ಉದ್ಯೋಗ



















