ಪಣಜಿ: ಉತ್ತರ ಗೋವಾದ ಅರ್ಪೋರಾದ ರೋಮಿಯೋ ಲೇನ್‌ನಲ್ಲಿರುವ ಫೇಮಸ್ ನೈಟ್ ಕ್ಲಬ್‌ನಲ್ಲಿ ತಡರಾತ್ರಿ ಬೆಂಕಿ ದುರಂತ ಸಂಭವಿಸಿದ್ದು, 23 ಪ್ರವಾಸಿಗರು ದಾರುಣ ಸಾವನ್ನಪ್ಪಿದ್ದು, ಸಿಲಿಂಡರ್ ಸ್ಪೋಟದ ಶಂಕೆ ಎನ್ನಲಾಗಿದೆ.
ಫೇಮಸ್ ನೈಟ್‌ಕ್ಲಬ್ ಬಿಚ್‌ನಲ್ಲಿ ಘಟನೆ ನಡೆದಿದ್ದು, ಸುಮಾರು 50 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಗೋವಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಇನ್ನೂ ಪ್ರಾಥಮಿಕ ವರದಿಗಳ ಪ್ರಕಾರ, 3-4 ಮಂದಿ ಮಾತ್ರ ಪ್ರವಾಸಿಗರಾಗಿದ್ದರು ಉಳಿದ 19 ಮಂದಿ ಕ್ಲಬ್‌ನ ಸಿಬ್ಬಂದಿಯೇ ಆಗಿದ್ದಾರೆ ಎನ್ನಲಾಗಿದೆ.
ಘಟನೆ ಕುರಿತು ಮಾಹಿತಿ ನೀಡಿರುವ ಪೊಲೀಸರು, ತಡರಾತ್ರಿ 1 ಗಂಟೆ ಸುಮಾರಿಗೆ ಕ್ಲಬ್ ಮುಚ್ಚಲು ಎಲ್ಲಾ ಸಿದ್ಧತೆ ಮಾಡಿಕೊಳ್ಳುತ್ತಿದ್ದರು ಅಷ್ಟರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಅಡುಗೆ ಮನೆಯ ಬಳಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿದ್ದೆ ಅನ್ನೋ ಶಂಕೆಯಿದೆ. ಸ್ಫೋಟದ ತೀವ್ರತೆಗೆ ಕೆಲವೇ ಸೆಕೆಂಡುಗಳಲ್ಲಿ ಇಡೀ ಕಟ್ಟಡಕ್ಕೆ ಬೆಂಕಿ ಕೆನ್ನಾಲಿಗೆ ಚಾಚಿಕೊಂಡಿದೆ. ಕ್ಲಬ್‌ನ ಒಳಗಿದ್ದವರಿಗೆ ತಪ್ಪಿಸಿಕೊಳ್ಳಲು ಸಮಯಾವಕಾಶವಿತ್ತು. ಆದಾಗ್ಯೂ ದುರಂತ ಸಂಭವಿಸಿದೆ. ಮೇಲ್ನೋಟಕ್ಕೆ ಸಿಲಿಂಡರ್ ಸ್ಫೋಟಗೊಂಡಿರುವ ಶಂಕೆ ವ್ಯಕ್ತವಾಗಿದೆ. ಆದ್ರೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಮದ್ಯದ ಅಮಲಿನಲ್ಲಿ ಜಗಳ | ಪತಿಯನ್ನು ಕೊಂದು ಶವದ ಜೊತೆ ಇಡೀ ರಾತ್ರಿ ಕಳೆದ ಪತ್ನಿ


















